Month: July 2024

ಕಾರ್ಕಳ: ಕೆ.ಎಂ.ಇ.ಎಸ್ ಶಾಲೆಯಲ್ಲಿ ವನಮಹೋತ್ಸವ

ಕಾರ್ಕಳ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪರಿಸರ ನಾಶದಿಂದ ಪ್ರಾಕೃತಿಕ ಅಸಮತೋಲನ ಉಂಟಾಗಿ ಅನೇಕ ಸಮಸ್ಯೆಗಳು ಉಂಟಾಗಿವೆ. ಪರಿಸರವನ್ನು ನಾವು ರಕ್ಷಿಸಿದರೆ ಅದು ನಮ್ಮನ್ನು ಕಾಪಾಡುತ್ತದೆ. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳು ಕಾಳಜಿ ವಹಿಸಬೇಕು. ವನಮಹೋತ್ಸವ ಕೇವಲ ಒಂದು ದಿನದ ಆಚರಣೆಯಾಗದೆ ನಿತ್ಯೋತ್ಸವ…

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ.ಕೆ. ಶಿವಕುಮಾರ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ ಇಂಧನ ಸಚಿವರಾಗಿದ್ದಾಗ ಅಕ್ರಮವಾಗಿ…

ಕಾರ್ಕಳ  ಟೈಗರ್ಸ್ ಹಾಗೂ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಪತ್ರಿಕಾ ಮಾಸಾಚರಣೆ, ಪತ್ರಕರ್ತರಿಗೆ ಸನ್ಮಾನ

ಕಾರ್ಕಳ: ಕಾರ್ಕಳ ಟೈಗರ್ಸ್ ಹಾಗೂ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದ ವತಿಯಿಂದ ಪತ್ರಿಕಾ ಮಾಸಾಚರಣೆ ಹಾಗೂ ಪತ್ರಕರ್ತರಿಗೆ ಸನ್ಮಾನ ಕಾರ್ಯಕ್ರಮವು ಜು.13ರಂದು ಸಾಲ್ಮ,ರದ ಗುರುದೀಪ್ ಗಾರ್ಡನ್ಸ್ ನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಎಸ್.ವಿ ಟಿ ವನಿತಾ ಪದವಿಪೂರ್ವ…

ಕಲಂಬಾಡಿಪದವು ಸರ್ಕಾರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಉದ್ಘಾಟನೆ

ಕಾರ್ಕಳ: ಕಲಂಬಾಡಿ ಪದವು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿನ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶನಿವಾರ ನಡೆಯಿತು. ಶಾಲಾ ಎಸ್.ಡಿ. ಎಂ.ಸಿ. ಅಧ್ಯಕ್ಷ ದಯಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು, ಯಕ್ಷಗಾನ ಭಾಗವತರಾದ ಮೋಹನ್ ಕಲಂಬಾಡಿ, ಹಳೆ…

ಉಡುಪಿಯಲ್ಲಿ ಭಾರಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ಸಾವು

ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ . ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಂಬಲಪಾಡಿಯ ಶೆಟ್ಟಿ…

ಜು 22ರಿಂದ ಅಂಗನವಾಡಿಗಳಲ್ಲಿ ಎಲ್​ಕೆಜಿ-ಯುಕೆಜಿ ಆರಂಭ -ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ಜು.22ರಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ಶಾಲೆ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮಾಹಿತಿ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ…

ಜಮ್ಮುಕಾಶ್ಮೀರ: ಗಡಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ: ಮೂವರು ಉಗ್ರರ ಹತ್ಯೆ, ಶಸ್ತ್ರಾಸ್ತ್ರ ವಶಕ್ಕೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೇರಾನ್ ಸೆಕ್ಟರ್‌ನಲ್ಲಿ ಭಾನುವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ಭಾರತೀಯ ಸೇನೆ, ಮೂವರು ಅಪರಿಚಿತ ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಕುಪ್ವಾರಾದ ಕೇರನ್ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಮೂವರು…

ಭಾರೀ ಮಳೆಯಾಗುತ್ತಿರುವ ಹಿನ್ನೆಲೆ: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಮಂಗಳೂರು:ಕಳೆದ ಎರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜುಲೈ 15) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಪ್ರಾಥಮಿಕ…

ಕಾರ್ಕಳ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಮಹಿಳೆಗೆ ಬರೋಬ್ಬರಿ 7.50 ಲಕ್ಷ‌ ವಂಚನೆ

ಕಾರ್ಕಳ: ಅಪರಿಚಿತ ವ್ಯಕ್ತಿಯನ್ನು ನಂಬಿ ಮಹಿಳೆಯೊಬ್ಬರು ಫೇಸ್ಬುಕ್ ಮೂಲಕ ಕಂಟೈನರ್ ಖರೀದಿಸಲು 700 ರೂ ಹಣ ಪಾವತಿಸಿದ ಬಳಿಕ ಆನ್ ಲೈನ್ ವಂಚಕ ಒಂದು ತಿಂಗಳ ಬಳಿಕ 850 ರೂ ಹಣವನ್ನು ಮಹಿಳೆಯ ಖಾತೆಗೆ ಹಾಕಿ ಬಳಿಕ ಆಕೆಯ ಬಳಿ ಹಣ…

ಸೋಲಿನ ಹತಾಶೆಯಿಂದ ನೀರಿನಿಂದ ಹೊರತೆಗೆದ ಮೀನಿನಂತೆ ಚಡಪಡಿಸುತ್ತಿರುವ ಕಾರ್ಕಳ ಕಾಂಗ್ರೆಸ್ : ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ವ್ಯಂಗ್ಯ

ಕಾರ್ಕಳ: ಯಾವ ವೇದಿಕೆಯಲ್ಲಿ ಯಾವ ವಿಚಾರ ಪ್ರಸ್ತಾಪ ಮಾಡಬೇಕೆಂಬ ಪರಿಜ್ಞಾನವಿಲ್ಲದ ಕಾರ್ಕಳ ಕಾಂಗ್ರೆಸ್ ಸೋಲಿನ ಹತಾಶೆಯಿಂದ ನೀರಿನಿಂದ ಹೊರತೆಗೆದ ಮೀನಿನಂತೆ ಚಡಪಡಿಸುತ್ತಿದೆ. ಕಾರ್ಕಳದಲ್ಲಿ ನಡೆದ ಜನಸ್ಪಂದನ ಸಭೆಯಲ್ಲಿ ದಾಂಧಲೆ ನಡೆಸಿ ತಾಲೂಕಿನ ಜನರಿಗೆ ಘೋರ ಅನ್ಯಾಯ ಮಾಡಿದ್ದು, ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ…