Month: July 2024

ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ ರಾವ್ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶ್ರೀಧರ ರಾವ್ ಇರಾ, ಕೂಡ್ಲು, ಕರ್ನಾಟಕ, ಮೂಲ್ಕಿ ಮತ್ತು ಧರ್ಮಸ್ಥಳ ಯಕ್ಷಗಾನ ಮೇಳಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ತೆಂಕುತಿಟ್ಟಿನ ಅಪ್ರತಿಮ ಸ್ತ್ರೀ ವೇಷಧಾರಿಯಾಗಿ ಕಲಾಸೇವೆ ಮಾಡಿರುವ ಅವರು…

ಎಳ್ಳಾರೆ: ಮುಳ್ಕಾಡು ಶಾಲೆಯಲ್ಲಿ ಕರಾಟೆ ತರಬೇತಿ ಶಿಬಿರ ಉದ್ಘಾಟನೆ

ಅಜೆಕಾರು: ಎಳ್ಳಾರೆ ಗ್ರಾಮದ ಮುಳ್ಕಾಡು ಶಾಲೆಯಲ್ಲಿ ಕರಾಟೆ ತರಬೇತಿ ಕಾರ್ಯಾಗಾರವು ಜರುಗಿತು. ಕರಾಟೆ ಗುರು ಸೋಮನಾಥ್ ಕರಾಟೆ ತರಬೇತಿ ಶಿಬಿರವನ್ನು ಉದ್ಘಾಟಿಸಿ, ಗ್ರಾಮಾಂತರ ಪ್ರದೇಶದಲ್ಲಿರುವ ಮುಳ್ಕಾಡು ಸರ್ಕಾರಿ ಶಾಲೆ ಖಾಸಗಿ ಶಾಲೆಯನ್ನು ಮೀರಿಸುವಂತಹ ಎಲ್ಲಾ ಸೌಲಭ್ಯವನ್ನು ಹೊಂದಿದೆ, ಸರ್ಕಾರಿ ಶಾಲೆಯನ್ನು ಉಳಿಸುವ…

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಮತ್ತೆ ಸಂಕಷ್ಟ: ಜು.15ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜುಲೈ.15 ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳಿಗೆ ನಗರದ…

ಅನ್ನಭಾಗ್ಯ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ : ಸರ್ಕಾರಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ಯೋಜನೆಯ ಅಕ್ಕಿಯನ್ನು ಮಾರಾಟ ಮಾಡುವವರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯ ಮೂರ್ತಿ ವಿ.ಶ್ರೀಷಾನಂದ ಅವರು ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ…

ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ಪುಣ್ಯ ಸ್ಮರಣೆ ಪ್ರಯುಕ್ತ ಕಾರ್ಕಳ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ – ಬಡವರಿಗೆ ನ್ಯಾಯ ಒದಗಿಸಿಕೊಟ್ಟ ಶ್ರೇಷ್ಠ ನಾಯಕ ಗೋಪಾಲ ಭಂಡಾರಿ:ಮುನಿಯಾಲು ಉದಯ ಶೆಟ್ಟಿ

ಕಾರ್ಕಳ: ಮಾಜಿ ಶಾಸಕ ದಿ.ಗೋಪಾಲ ಭಂಡಾರಿ ತನ್ನ ರಾಜಕೀಯ ಜೀವನದಲ್ಲಿ ಮೌಲ್ಯಯುತ ರಾಜಕಾರಣ ಮಾಡಿಕೊಂಡು ಬಂದಿರುವ ಸರಳ ಸಜ್ಜನಿಕೆಯ ರಾಜಕಾರಣಿ.ಸದಾ ಬಡವರ ಪರವಾಗಿ ಹೋರಾಟ ನಡೆಸಿ ಬಡವರಿಗೆ ನ್ಯಾಯ ಒದಗಿಸಿಕೊಟ್ಟು ಉಳಿದ ರಾಜಕೀಯ ನಾಯಕರಿಗೆ ಮಾದರಿ ಎನಿಸಿಕೊಂಡಿದ್ದರು ಎಂದು ಕಾಂಗ್ರೆಸ್ ನಾಯಕ…

ಟಿ20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ ದೆಹಲಿಯಲ್ಲಿ ಅದ್ದೂರಿ ಸ್ವಾಗತ: ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ

ನವದೆಹಲಿ:ವೆಸ್ಟ್ ಇಂಡೀಸ್ ನ ಬಾರ್ಬಡೋಸ್ ನಲ್ಲಿ ನಡೆದ ಟಿ 20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಗೆದ್ದ ಭಾರತೀಯ ಕ್ರಿಕೆಟ್ ತಂಡ ಗುರುವಾರ ಮುಂಜಾನೆ ನವದೆಹಲಿಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ವಿಶ್ವಕಪ್ ಜತೆ ಬಂದ ಭಾರತೀಯ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ…

ಅಶ್ವಿನಿ ನಕ್ಷತ್ರ ಖ್ಯಾತಿಯ ಮಯೂರಿ ಮರಳಿ ಕಿರುತೆರೆಗೆ: ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ “ನನ್ನ ದೇವ್ರು” ಜು.8 ರಿಂದ ನಿತ್ಯ ಸಂಜೆ 6.30 ರಿಂದ ಪ್ರಸಾರ

ಕರಾವಳಿ ನ್ಯೂಸ್ ಡೆಸ್ಕ್: ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ “ನನ್ನ ದೇವ್ರು” ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಇದೇ ಬರುವ ಜುಲೈ8 ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ…

ಉಡುಪಿ ಜಿಲ್ಲೆಯಲ್ಲಿ ಗಾಳಿ, ಮಳೆ ಹಾನಿ : ಮಾಹಿತಿ ಪಡೆದು, ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್

ಬೆಂಗಳೂರು : ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿರುವ ಸಚಿವರು ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸಧ್ಯದ ಪರಿಸ್ಥಿತಿಯ…

ಇನ್ನಾ: ಭಾರೀ ಗಾಳಿಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

ಕಾರ್ಕಳ: ಕಾರ್ಕಳ ತಾಲೂಕಿನಾದ್ಯಂತ ಕಳೆದೆರಡು ದಿನಗಳಿಂದ ಭಾರೀ ಗಾಳಿ ಮಳೆ ಸುರಿಯುತ್ತಿದ್ದು ಬುಧವಾರ ಇನ್ನಾ ಗ್ರಾಮದ ಮಠದಕೆರೆ ಎಂಬಲ್ಲಿನ ನಿವಾಸಿ ಸುರೇಶ ಮೂಲ್ಯ ಬಿನ್ ಬೈಕ್ಲ ಮೂಲ್ಯ ರವರ ಮನೆಗೆ ಮರಬಿದ್ದು ಅಪಾರ ಹಾನಿಯಾಗಿದೆ. ಮನೆಗೆ ಮರ ಉರುಳಿ ಬಿದ್ದು ಸುಮಾರು…

ಪರವಾನಗಿ ನವೀಕರಿಸದ ಆರೋಪ ಹಿನ್ನೆಲೆ: ಪವರ್ ಟಿವಿ ಕಾರ್ಯಚಟುವಟಿಕೆ ಸ್ಥಗಿತ: ಮಧ್ಯಪ್ರವೇಶಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪರವಾನಗಿ ನವೀಕರಿಸದ ಆರೋಪದ ಹಿನ್ನೆಲೆಯಲ್ಲಿ ಪವರ್ ಟಿವಿ ಕನ್ನಡ ಸುದ್ದಿ ವಾಹಿನಿ ಕಾರ್ಯಕ್ರಮಗಳ ಪ್ರಸಾರ ಸ್ಥಗಿತಗೊಳಿಸಬೇಕು ಎಂದು ಹೈಕೋರ್ಟ್ನ ಏಕಸದಸ್ಯ ಪೀಠ ಮಾಡಿರುವ ಆದೇಶವನ್ನು ರದ್ದುಪಡಿಸಲು ವಿಭಾಗೀಯ ಪೀಠ ಬುಧವಾರ ನಿರಾಕರಿಸಿದೆ. ಪವರ್ ಸ್ಮಾರ್ಟ್ ಮೀಡಿಯಾ ಪ್ರೈ. ಲಿ., ಮಿಟ್‌ಕಾನ್…