Month: July 2024

ಬೆಳ್ಮಣ್: ಹೃದಯಾಘಾತದಿಂದ ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ಟ್ರ್ಯಾಕ್ಟರ್ ಚಾಲಕ ಸಾವು

ಕಾರ್ಕಳ: ಗದ್ದೆಯಲ್ಲಿ ಉಳುಮೆ ಮಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಳ್ಮಣ್‌ನಲ್ಲಿ ಭಾನುವಾರ ನಡೆದಿದೆ. ಸಂಜೀವ (40) ಮೃತಪಟ್ಟವರು. ಅವರು ಭಾನುವಾರ ಬೆಳ್ಮಣ್ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ಪ್ರಕಾಶ್ ಎಂಬವರ ಗದ್ದೆಯಲ್ಲಿ ಟ್ರ್ಯಾಕ್ಟರ್ ನಿಂದ ಉಳುಮೆ ಮಾಡುತ್ತಿದ್ದ ವೇಳೆ…

ಕೆರ್ವಾಶೆ: ಅಪ್ಪ ಅಮ್ಮನ ಜಗಳ ಬಿಡಿಸಲು ಹೋಗಿ ಮಗಳು ಆಸ್ಪತ್ರೆಗೆ!

ಕಾರ್ಕಳ: ಅಪ್ಪ ಅಮ್ಮನ ಜಗಳವನ್ನು ಬಿಡಿಸಲು ನಡುವೆ ಹೋದ ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬಲ್ಲಿ ನಡೆದಿದೆ. ಭಾರತಿ ಹಾಗೂ ರಾಮಣ್ಣ ದಂಪತಿಗಳು ಆಗಾಗ ವಿನಾಕಾರಣ ಕಿತ್ತಾಡುತ್ತಿದ್ದರು. ಇವರಿಬ್ಬರ ನಡುವೆ ಜೂ 29ರಂದು ಶನಿವಾರ ಜಗಳವಾಗಿ,…

ಹಳೆಯ ಕ್ರಿಮಿನಲ್ ಕಾನೂನುಗಳಿಗೆ ತಿಲಾಂಜಲಿ: ಇಂದಿನಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ

ನವದೆಹಲಿ: ಇಂದಿನಿಂದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ದೇಶದಲ್ಲಿ ಜಾರಿಗೆ ಬಂದಿದ್ದು, ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ದೂರಗಾಮಿ ಬದಲಾವಣೆಗಳನ್ನು ತಂದಿವೆ. ಇನ್ನುಮುಂದೆ ಸಿಆರ್‌ಪಿಸಿ, ಐಪಿಸಿ ಇತ್ಯಾದಿ ಸೆಕ್ಷನ್‌ಗಳು ಇತಿಹಾಸ ಪುಟ ಸೇರಲಿವೆ. ಬ್ರಿಟಿಷರ ಕಾಲದಿಂದ ಜಾರಿಯಲ್ಲಿದ್ದ ಈ ಕ್ರಿಮಿನಲ್ ಕಾನೂನುಗಳ…

ಕ್ರಿಯೇಟಿವ್‌ ಪಿ ಯು ಕಾಲೇಜಿನ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ C.A, C.S.E.E.T ಮಾಹಿತಿ ಕಾರ್ಯಗಾರ

ಕಾರ್ಕಳ:ಕ್ರಿಯೇಟಿವ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಸಿ.ಎ ಫೌಂಡೇಶನ್ ವತಿಯಿಂದ C.A ಹಾಗೂ C.S.E.E.T ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಈ ಕಾರ್ಯಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಚಾರ್ಟರ್ಡ್ ಅಕೌಂಟೆಂಟ್ ಪ್ರದೀಪ್ ಜೋಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ವಿದ್ಯಮಾನದಲ್ಲಿ ಚಾರ್ಟರ್ಡ್‌ ಅಕೌಂಟ್‌…

ಜುಲೈ 4 ರಂದು ಮಾಜಿ ಶಾಸಕ ಗೋಪಾಲ ಭಂಡಾರಿಯವರ ಪುಣ್ಯಸ್ಮರಣೆಯ ಪ್ರಯುಕ್ತ ರಕ್ತದಾನ ಶಿಬಿರ

ಕಾರ್ಕಳ: ಮಾಜಿ ಶಾಸಕ ದಿ. ಹೆಚ್. ಗೋಪಾಲ ಭಂಡಾರಿಯವರ 5ನೇ ವರ್ಷದ ಪುಣ್ಯಸ್ಮರಣೆಯ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಜುಲೈ 4 ರಂದು ಪೆರ್ವಾಜೆ ನಾರಾಯಣ ಗುರು ಸಭಾಭವನದಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷದ ಹಿರಿಯ ಮುಖಂಡರುಗಳು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು…

ಕನ್ನಡಿಗರಿಗೆ ಉದ್ಯೋಗಕ್ಕಾಗಿ ಕರವೇ ಹೋರಾಟ: ಶೇ.80ರಷ್ಟು ಉದ್ಯೋಗ ಮೀಸಲಾತಿ ಆಗ್ರಹಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಬೆಂಗಳೂರು: ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ…