Month: September 2024

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭಯೋತ್ಪಾದಕರ ಎನ್‌ಕೌಂಟರ್: 4 ಮಂದಿ ಭದ್ರತಾ ಸಿಬ್ಬಂದಿ, ಪೊಲೀಸ್ ಅಧಿಕಾರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು (ಶನಿವಾರ) ನಡೆದ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ಕನಿಷ್ಠ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಮತ್ತು ಟ್ರಾಫಿಕ್ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭದ್ರತಾ ಪಡೆಗಳು ಕಾರ್ಡನ್…

ಬಾಸ್ಕೆಟ್ ಬಾಲ್ ನಲ್ಲಿ ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ

ಕಾರ್ಕಳ : ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ…

ಸುರತ್ಕಲ್-ನಂತೂರು ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ಕಾಲಮಿತಿಯೊಳಗಡೆ ಪೂರ್ಣಗೊಳಿಸಲು ಆಗ್ರಹ: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನೆಯ ಎಚ್ಚರಿಕೆ

ಮಂಗಳೂರು: ಸುರತ್ಕಲ್- ನಂತೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ಬೃಹತ್ ಗಾತ್ರದ ಗುಂಡಿಗಳು ದೊಡ್ಡ ಸಂಖ್ಯೆಯಲ್ಲಿ ಬಿದ್ದಿದ್ದು ವಾಹನ ಸಂಚಾರ ಅಪಾಯಕಾರಿ ಸ್ಥಿತಿಗೆ ತಲುಪಿದೆ. ಈಗಾಗಲೇ ಕಳೆದ ಮೂರು ತಿಂಗಳ ಅವಧಿಯಲ್ಲಿ ಹಲವು ಅಪಘಾತಗಳು ನಡೆದು, ಪ್ರಾಣಹಾನಿಗಳು ಉಂಟಾಗಿವೆ. ಕೆಲವೆಡೆ ರಸ್ತೆ ಪೂರ್ತಿ…

ರೈತರು ಸಂಪೂರ್ಣ, ಕನಿಷ್ಠ ದಾಖಲೆ ಹೊಂದಿದ್ದರೂ “ದರ್ಖಾಸ್ತು ಪೋಡಿ” ವಿತರಣೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ ಮಾಹಿತಿ

ಬೆಂಗಳೂರು: ರೈತರ ದಶಕಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಸಂಪೂರ್ಣ ಹಾಗೂ ಕನಿಷ್ಟ ದಾಖಲೆ ಹೊಂದಿರುವ ರೈತರಿಗೆ ಮುಂದಿನ ಎರಡು-ಮೂರು ವರ್ಷದಲ್ಲಿ ಖಚಿತವಾಗಿ ದರ್ಖಾಸ್ತು ಪೋಡಿ ಮಾಡಿಕೊಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದ್ದಾರೆ.…

ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗುವುದು ದ್ವೇಷದ ಘೋಷಣೆಯಲ್ಲ : ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಭಾರತ್ ಮಾತಾ ಕಿ ಜೈ. ಇದು ಕೋಮುಗಲಭೆ ಸೃಷ್ಟಿಸುವ ಘೋಷಣೆ ಎಂದು ಹಿಂದೂ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ವಿಶೇಷ ವಿಚಾರಣೆ ನಡೆದಿದ್ದು ದಕ್ಷಿಣ ಕನ್ನಡದ ಬೋಳಿಯಾರ್‌ನಲ್ಲಿ ನಡೆದ ಚಾಕು ಇರಿತ ಪ್ರಕರಣ ವಿಚಾರಣೆಯಲ್ಲಿ.…

ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಸಂಕಷ್ಟ: ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತದಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ

ಬೆಂಗಳೂರು:ಮುಡಾ ಅಕ್ರಮ ಸೈಟ್ ಹಂಚಿಕೆ ಪ್ರಕರಣದಲ್ಲಿ ಸಾಕಷ್ಟು ವಿಳಂಬದ ನಡುವೆಯೂ ಇಂದು ಸಿಎಂ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ಸಂಸ್ಥೆಯ ತನಿಖೆಯಿಂದ ಸತ್ಯಾಂಶ ಹೊರಬರುವುದು ಸಾಧ್ಯವಿಲ್ಲ, ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ…

ಕಾರ್ಕಳ : ಮುಡಾರಿನ ಮನೆಯೊಂದರ ಸೋಫಾದಲ್ಲಿ ಗಾಂಜಾ ಪತ್ತೆ: ಪ್ರಕರಣ ದಾಖಲು

ಕಾರ್ಕಳ: ಮುಡಾರಿನ ಮನೆಯೊಂದರಲ್ಲಿ ಸೆ. 26 ರ ಗುರುವಾರ ಗಾಂಜಾ ಪತ್ತೆಯಾಗಿದ್ದು, ಗಾಂಜಾ ಸಹಿತ ಆರೋಪಿಯನ್ನು ವಶಪಡಿಸಿಕೊಂಡ ಪೊಲೀಸರು ಪ್ರಕರಣದ ದಾಖಲಿಸಿಕೊಂಡಿದ್ದಾರೆ. ಮುಡಾರು ಗ್ರಾಮದ ಮಿಯಾರು ಸೇತುವೆ ಬಳಿಯ ಶಾಜಿ ಮ್ಯಾಥ್ಯೂ ಎಂಬವರು 2023ರಲ್ಲಿ ಗಾಂಜಾ ಕೇಸ್ಗೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ…

ಕುಕ್ಕುಜೆ: ಸ್ಟುಡಿಯೋ ಮಾಲಕ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕುಕ್ಕುಜೆ ಗ್ರಾಮದ ದೊಂಡೇರಂಗಡಿಯಲ್ಲಿ ಅನನ್ಯ ಫೋಟೋ ಸ್ಟುಡಿಯೋ ನಡೆಸಿಕೊಂಡಿದ್ದ ಕುಕ್ಕುಜೆ ಬಾವಲಿಮನೆ ನಿವಾಸಿ ಅಶೋಕ ಶೆಟ್ಟಿ ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಶುಕ್ರವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಮಧ್ಯಾಹ್ನ ಊಟಕ್ಕೆಂದು ಹೋದವರು ಮಹಡಿಯಲ್ಲಿ ನೇಣು…

ಮುಡಾ ಹಗರಣ:ಸಿಎಂ ಸಿದ್ಧರಾಮಯ್ಯ ವಿರುದ್ಧ FIR ದಾಖಲು

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ…

ಮಂಗಳೂರು : ತೋಟ ಬೆಂಗ್ರೆ ಮೇಸ್ತ್ರಿ ಕೊಲೆ ಪ್ರಕರಣ :ಆರೋಪಿ ಧರ್ಮರಾಜ್ ಸುವರ್ಣ ಬಂಧನ

ಮಂಗಳೂರು : ತೋಟ ಬೆಂಗ್ರೆ ಪ್ರದೇಶದಲ್ಲಿ ನಡೆದಿದ್ದ ಮೇಸ್ತ್ರಿ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೊಬೈಲ್ ವಾಪಾಸ್ ಕೊಡದಕ್ಕೆ ಮೇಸ್ತ್ರಿ ಬಸವರಾಜ ವಡ್ಡರ್ ಅಲಿಯಾಸ್ ಮುದುಕಪ್ಪ ಕೊಲೆ ಮಾಡಲಾಗಿದೆ ಎಂದು ತನಿಖೆ…