Month: October 2024

ಮಂಗಳೂರು: ಗಾಂಜಾ ಮಾರಲು ಯತ್ನಿಸಿದ ವ್ಯಕ್ತಿಯ ಬಂಧನ: ಬಿಹಾರ ಮೂಲದ ಸೋನಿ ಬಂಧಿತ ಆರೋಪಿ

ಮಂಗಳೂರು : ಹೊಸಬೆಟ್ಟು ಬಳಿಯ ಬೀಚ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಸುರತ್ಕಲ್ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ಮೂಲದ ಸೋನಿ (27) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 30 ಸಾವಿರ ಮೌಲ್ಯದ 1.5 ಕೆಜಿ ಗಾಂಜಾ,…

ಇಂದು (ಅ.19)ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗದಿಂದ “ಶಿವದೂತ ಗುಳಿಗೆ”

ಕಾರ್ಕಳ: ಕಾರ್ಕಳದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವ ಮೂಲಕ ಜನ ಮಾನಸದಲ್ಲಿ ವಿಶಿಷ್ಟ ಚಾಪನ್ನು ಕಾರ್ಕಳ ಟೈಗರ್ಸ್ ಮೂಡಿಸಿದೆ. ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಈ ಸಂಘಟನೆ ಮಾಡಿದ್ದು, ಈಗ ಮತ್ತೊಂದು ಕಾರ್ಯಕ್ರಮಕ್ಕೆ ಈ ಸಂಘಟನೆ…

ಬೆಳ್ಮಣ್ : ಸಂಬಳದ ವಿಚಾರದಲ್ಲಿ ಜಗಳ : ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ

ಕಾರ್ಕಳ: ಕಾರ್ಕಳ ತಾಲೂಕಿನ ಬೆಳ್ಮಣ್ ನಲ್ಲಿ ಸಂಬಳದ ವಿಚಾರವಾಗಿ ನಡೆದ ಜಗಳ ತಾರಕಕ್ಕೇರಿ ಒಬ್ಬ ಇನ್ನೊಬ್ಬನಿಗೆ ಬೀಯರ್ ಬಾಟ್ಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ. ಅ.16 ರಂದು ಬೋಳದ ಪ್ರವೀಣ್‌ ಕುಮಾರ್‌ ಹಾಗೂ ಅವರ ಪರಿಚಯದ ಸಂತೋಷ್‌ ಎಂಬವರು ಬೆಳ್ಮಣ್‌…

ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಕರ್ನಾಟಕ ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ 19.34 ಕೋಟಿ ರೂ. ಹಣ ಅಕ್ರಮ ವರ್ಗಾವಣೆ

ಬೆಂಗಳೂರು: ವಾಲ್ಮೀಕಿ ನಿಗಮ ಹಗರಣ ಮತ್ತು ಮುಡಾ ಹಗರಣದ ನಡುವೆ ಇದೀಗ ಕರ್ನಾಟಕ ರಾಜ್ಯ ಕೋ ಆಪರೇಟಿವ್ ಸೊಸೈಟಿಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿದೆ. ಸೊಸೈಟಿಯಲ್ಲಿ ಬರೋಬ್ಬರಿ 19.34 ಕೋಟಿ ರೂ, ಹಣ ಅಕ್ರಮ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದ್ದು, ಈ…

ನ.23 ರಂದು 641 ಗ್ರಾಮ ಪಂಚಾಯಿತಿಗಳ ಖಾಲಿ ಸ್ಥಾನಗಳಿಗೆ ಉಪ ಚುನಾವಣೆ: ನ.25ಕ್ಕೆ ಫಲಿತಾಂಶ

ಬೆಂಗಳೂರು: ಗ್ರಾಮ ಪಂಚಾಯಿತಿಗಳ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ನ. 23 ರಂದು ರಾಜ್ಯದ 641 ಗ್ರಾಮ ಪಂಚಾಯಿತಿಗಳಿಗೆ ಉಪಚುನಾವಣೆ ನಡೆಯಲಿದ್ದು ನ.25ರಂದು ಫಲಿತಾಂಶ ಪ್ರಕಟವಾಗಲಿದೆ. ನ.06ರಂದು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಚುನಾವಣಾ…

ಪೊಲೀಸ್ ಠಾಣೆ ಮೆಟ್ಟಿಲೇರಿದ ಗಂಡ ಹೆಂಡತಿ ಜಗಳ: ವಿಚಾರಣೆ ನಡೆಸದೇ ಪತಿಯ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಹಲ್ಲೆ ಆರೋಪ ನಿರಾಕರಿಸಿದ ಪೊಲೀಸರು

ಕಾರ್ಕಳ: ಗಂಡ ಹೆಂಡತಿ ನಡುವಿನ ಕೌಟುಂಬಿಕ ಕಲಹವು ಕಾರ್ಕಳ ನಗರ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ಪತಿಯ ವಿರುದ್ಧ ಪತ್ನಿ ನೀಡಿದ್ದ ದೂರಿನ ಹಿನ್ನಲೆಯಲ್ಲಿ ಠಾಣೆಗೆ ಕರೆಸಿಕೊಂಡ ಪೊಲೀಸರು ವಿಚಾರಣೆ ನಡೆಸದೇ ನನ್ನ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆಯ ಪತಿ…

ಹಿಂದೂ ಹೆಣ್ಣುಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಸೇವೆಯಿಂದ ವಜಾಗೊಳಿಸಿ: ಅರಣ್ಯ ಸಚಿವರಿಗೆ ಶಾಸಕ ವಿ ಸುನಿಲ್ ಕುಮಾರ್ ಆಗ್ರಹ

ಕಾರ್ಕಳ: ಬಿಲ್ಲವ ಹೆಣ್ಣು ಮಕ್ಕಳು ಹಾಗೂ ಹಿಂದು ಸಂಘಟನೆಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿರುವ ಪುತ್ತೂರಿನ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ. ಸರ್ಕಾರಿ ಸೇವಾ ನಿಯಮಗಳನ್ನು ಉಲ್ಲಂಘಿಸಿ ಒಬ್ಬ ಅಧಿಕಾರಿ ಸಮುದಾಯ,…

ಹಿಂದೂ ಹುಡುಗಿಯರ ಕುರಿತು ಅವಹೇಳನಕಾರಿ ಶಬ್ದ ಬಳಕೆ ಆರೋಪ: ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಬಂಧನ

ಬೆಳ್ಳಾರೆ: ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ…

ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ : ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ…

ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಬೆಳ್ಳಿ ಗೆದ್ದ ಎಸ್ ವಿ ಟಿ ಯ ರಕ್ಷಾ: ಕುಸ್ತಿ ಪಂದ್ಯಾಟದಲ್ಲಿ ಸಾಕ್ಷಿ ಶೆಟ್ಟಿಗೆ ಕಂಚಿನ ಪದಕ

ಕಾರ್ಕಳ: ಶಿಕ್ಷಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ಬೆಲ್ಟ್ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ ವನಿತಾ ಪದವಿಪೂರ್ವ ಕಾಲೇಜಿನ ರಕ್ಷಾ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಪಡೆದಿರುತ್ತಾರೆ. ರಾಜ್ಯ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಎಸ್ ವಿ ಟಿ…