Month: November 2024

ಉಡುಪಿ: ಸರ್ಕಾರಿ ಬಾಲಕಿಯರ ಕಾಲೇಜಿಗೆ ಶಾಸಕ ಯಶ್ ಪಾಲ್ ಸುವರ್ಣ, ಜಿ. ಪಂ. ಸಿ.ಇ.ಒ. ಭೇಟಿ : ಅಧಿಕಾರಿಗಳೊಂದಿಗೆ ಚರ್ಚೆ, ಪರಿಶೀಲನೆ

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಜಿಲ್ಲೆಯ ಏಕೈಕ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿ ಇಲಾಖೆಯ…

ಮಿಯ್ಯಾರು: ಪತಿಯನ್ನು ಕಳೆದುಕೊಂಡ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣು

ಕಾರ್ಕಳ : ಒಂದು ಕಳೆದ ತಿಂಗಳ ಹಿಂದೆ ಪತಿ ತೀರಿಕೊಂಡ ಬಳಿಕ ಮಾಸಿಕವಾಗಿ ಕೊರಗುತ್ತಿದ್ದ ಪತ್ನಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಕುಂಟಿಬೈಲ್ ಮಂಜಡ್ಕ ಎಂಬಲ್ಲಿ ನಡೆದಿದೆ. ಮಿಯ್ಯಾರಿನ ಸೌಮ್ಯ(39ವ) ಆತ್ಮಹತ್ಯೆ ಮಾಡಿಕೊಂಡವರು. ಕಳೆದ 15…

ನಿಟ್ಟೆ: ವಿದ್ಯುತ್ ಶಾಕ್ ನಿಂದ ಮಹಿಳೆ ಸಾವು :ಅಣ್ಣನ ತಿಥಿಯ ದಿನವೇ ತಂಗಿ ದಾರುಣ ಅಂತ್ಯ

ಕಾರ್ಕಳ : ಅಣ್ಣನ ತಿಥಿಗೆ ಸಿದ್ಧತೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ತಂಗಿ ವಿದ್ಯುತ್ ಶಾಕ್ ತಗುಲಿ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಪರಪ್ಪಾಡಿ ಎಂಬಲ್ಲಿ ನಡೆದಿದೆ. ಲಲಿತಾ ಬೋಂಟ್ರ ಮೃತಪಟ್ಟ ಮಹಿಳೆ. ನಿಟ್ಟೆ ಪರಪ್ಪಾಡಿಯ ರಾಘು ಬೋಂಟ್ರ ಎಂಬವರು ಕೆಲ…

ರಾಮೆಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ: ಐಸಿಸ್ ಉಗ್ರರಿಂದ ತರಬೇತಿ ಪಡೆದಿದ್ದ ಆರೋಪಿಗಳು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸಿದ ಎನ್‌ಐಎ ದೋಷಾರೋಪ ಪಟ್ಟಯಿಂದ ಮತ್ತೊಂದು ಸ್ಪೋಟಕ ವಿಚಾರ ಬಯಲಾಗಿದೆ. ಸ್ಪೋಟ ಪ್ರಕರಣದಲ್ಲಿ ಒಟ್ಟು ಆರು ಜನರ ಕೈವಾಡವಿದ್ದು, ಇವರು ಐಸಿಸ್ ಜೊತೆ ನಂಟು ಹೊಂದಿದ್ದಾರೆ ಎಂದು ತಿಳಿದುಬಂದಿತ್ತು. ಇದೀಗ, ಬಾಂಬ್…

ರಾಜ್ಯಮಟ್ಟದ ಅಂತರಕಾಲೇಜು ವೇಟ್ ಲಿಫ್ಟಿಂಗ್ ಸ್ಪರ್ಧೆ: ನಿಟ್ಟೆ ತಂಡಕ್ಕೆ ಪ್ರಥಮ ರನ್ನರ್ ಅಪ್ ಪ್ರಶಸ್ತಿ

ಕಾರ್ಕಳ: ಮೂಡಬಿದಿರೆಯ ಆಳ್ವಾಸ್ ಎಂಜಿನಿಯರಿAಗ್ ಕಾಲೇಜಿನಲ್ಲಿ ನ.12ರಂದು ನಡೆದ 2024ರ ವಿಟಿಯು ರಾಜ್ಯಮಟ್ಟದ ಅಂತರ ಕಾಲೇಜು ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ನಿಟ್ಟೆ ಪುರುಷರ ತಂಡ ಪ್ರಥಮ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. 67 ಕೆಜಿ ವಿಭಾಗದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿAಗ್…

“ಹಸಿರು ಸೆಸ್” ಗೆ ಆಕ್ಷೇಪಣೆ ವ್ಯಕ್ತವಾದರೆ ಪ್ರಸ್ತಾವನೆ ಕೈಬಿಡಲಾಗುತ್ತೆ : ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ

ಬೆಂಗಳೂರು : ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸಲು ನೀರಿನ ಬಿಲ್ ಮೇಲೆ 2ರಿಂದ 3 ರೂಪಾಯಿ ಹಸಿರು ಸೆಸ್ ವಿಧಿಸುವ ಪ್ರಸ್ತಾ ವನೆ ಸಿದ್ಧಪಡಿಸಲಾಗುತ್ತಿದ್ದು, ಈ ಕ್ರಮದಿಂದ ಜನರಿಗೆ ಯಾವುದೇ ಹೊರೆಯಾಗುವುದಿಲ್ಲ. ಒಂದು ವೇಳೆ ಜನರಿಂದ ಆಕ್ಷೇಪ ವ್ಯಕ್ತವಾದರೆ…

ವಕ್ಫ್ ನೋಟೀಸ್ ಗೆ ರೈತ ಆತ್ಮಹತ್ಯೆ ಎಂದು ಟ್ವೀಟ್: ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ವಕ್ಫ್ ಆಸ್ತಿ ಎಂದು ಪಹಣಿಯಲ್ಲಿ ನಮೂದಾದ ಹಿನ್ನಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಹೈಕೋರ್ಟ್…

ಕಾರ್ಕಳದಲ್ಲಿ ಮನೆಯಲ್ಲಿ ಅಕ್ರಮ ಮದ್ಯ ದಾಸ್ತಾನು: ಸಿದ್ದರಾಮಯ್ಯನವರ ಮುಂದಿನ ಗ್ಯಾರಂಟಿ ಮನೆಮನೆಗೆ ಬಾರ್ ಭಾಗ್ಯವೇ?: ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಪ್ರಶ್ನೆ

ಉಡುಪಿ: ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಜನಪರ ಆಡಳಿತದ ಮೂಲಕ ದೇಶವನ್ನು ವಿಶ್ವದ ಮುಂಚೂಣಿ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರೆತ್ತಲೂ ನೈತಿಕತೆ ಇಲ್ಲದ ಕಳಂಕಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಗ್ಯಾರಂಟಿ ‘ಮನೆ ಮನೆಗೆ ಬಾರ್ ಭಾಗ್ಯವೇ’…

ಕೋವಿಡ್‌ ಹಗರಣ : ಎಸ್‌ಐಟಿ ರಚನೆಗೆ ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭ ಕೋವಿಡ್-19 ಸೋಂಕಿನ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣಗಳ ತನಿಖೆಗೆ ರಾಜ್ಯ ಸರಕಾರ ನಿರ್ಧರಿಸಿದೆ. ಕೋವಿಡ್ ಹಗರಣದ ತನಿಖೆಗಾಗಿ ನೇಮಿಸಲಾಗಿದ್ದ ಮೈಕಲ್ ಡಿ.ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ಈಗಾಗಲೇ ರಾಜ್ಯ ಸರಕಾರಕ್ಕೆ ಸಲ್ಲಿಸಿದೆ.…

ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಮೂಲಕ ನರೇಂದ್ರ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ:ಉಡುಪಿ ಶಾಸಕ ಯಶ್ ಪಾಲ್ ಸುವರ್ಣ

ಉಡುಪಿ : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಹೆಮ್ಮೆಯ ಪಾಲಿಗೆ ಸದಾ ಹೆಮ್ಮೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ದೇಶದ ಭವಿಷ್ಯ ರೂಪಿಸುವ ವಿದ್ಯಾರ್ಥಿಗಳ ಶಿಕ್ಷಣಕ್ಕೆ…