Month: March 2025

ಕಾರ್ಕಳ ತಾಲೂಕು ಗ್ರಾಮೊದ್ಯೋಗ ವಿವಿದ್ಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ವಿಜೇತಾ ಪೈ, ಉಪಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಶರ್ಮಾ ಅವಿರೋಧ ಆಯ್ಕೆ

ಕಾರ್ಕಳ: ಕಾರ್ಕಳ ತಾಲೂಕು ಮಟ್ಟದ ಗ್ರಾಮೋದ್ಯೋಗ ವಿವಿದ್ಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಅಜೆಕಾರಿನ ವಿಜೇತಾ ಪೈ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಶರ್ಮಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಜೇತಾ ಪೈ ಅವರು ಪ್ರಸ್ತುತ ಅಜೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ…

ಮಿಯ್ಯಾರು ಗ್ರಾಮ ಪಂಚಾಯತ್‌ನಲ್ಲಿ  ಭಾರೀ ಗೋಲ್ ಮಾಲ್ ? : 3 ಫ್ಯಾನ್ ದುರಸ್ತಿಗೆ 13 ಸಾವಿರ ರೂ. ಬಿಲ್!: ಪಿಡಿಓ ‌ನಾಗರಾಜ್ ವಿರುದ್ದ ಭ್ರಷ್ಟಾಚಾರದ ಆರೋಪ : ಮಿಯ್ಯಾರು ಪಂಚಾಯತ್ ಗ್ರಾಮಸಭೆಯೇ ರದ್ದು!

ಕಾರ್ಕಳ : ಸಾರ್ವಜನಿಕರ ಹಾಗೂ ಅಧಿಕಾರಿಗಳ ನಡುವೆ ನಡೆದ ವಾಗ್ವಾದ ತಾರಕ್ಕಕ್ಕೇರಿದ್ದು ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದ ಅಧಿಕಾರಿಗಳು ಕೊನೆಗೆ ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿ ಸಭೆಯನ್ನು ಮುಂದೂಡಿದ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮ ಪಂಚಾಯತ್ ‌ನಲ್ಲಿ‌ ನಡೆದಿದೆ. ಮಿಯ್ಯಾರು ಗ್ರಾಮ ಪಂಚಾಯತ್…

ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್! :ಏ .1ರಿಂದ ಮತ್ತೆ ವಿದ್ಯುತ್ ದರ ಏರಿಕೆ: ಪ್ರತೀ ಯೂನಿಟ್ ಗೆ 36 ಪೈಸೆ ಹೆಚ್ಚಳ

ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಹೆಚ್ಚಳ, ಮೆಟ್ರೋ ಪ್ರಯಾಣ ದರ ಹೆಚ್ಚಳ ಸೇರಿದಂತೆ ಬೆಲೆ ಏರಿಕೆಯಿಂದ ಕಂಗಾಲಾಗಿರುವ ರಾಜ್ಯದ ಜನತೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತೊಂದು ಶಾಕ್ ನೀಡಿದೆ. ವಿದ್ಯುತ್ ದರ ಪ್ರತೀ ಯೂನಿಟ್‌ಗೆ 36 ಪೈಸೆ ಹೆಚ್ಚಳ…

ಮೀನು ಕದ್ದ ಮಹಿಳೆಗೆ ಥಳಿತ ಪ್ರಕರಣ : ಅನಾಗರಿಕ ವರ್ತನೆ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಉಡುಪಿಯ ಮಲ್ಪೆಯಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಥಳಿಸಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡನೆ ವ್ಯಕ್ತಪಡಿಸಿದ್ದು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಮೀನು ಕಳ್ಳತನ ಮಾಡಿದ್ದರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ…

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನ ಬಂಧನ

ಬೆಂಗಳೂರು: ಗುಪ್ತಚರ ಇಲಾಖೆ ಹಾಗೂ ಸೇನಾ ಇಂಟಲಿಜೆನ್ಸ್ ವಿಭಾಗ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ರವಾನಿಸುತ್ತಿದ್ದ ಗೂಢಚಾರನೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ. ಉತ್ತರಪ್ರದೇಶದ ಗಾಜಿಯಾಬಾದ್ ಮೂಲದ ನಿವಾಸಿ, ಬಿಇಎಲ್‌ನಲ್ಲಿ ಕೆಲಸ ಮಾಡುತ್ತಿದ್ದ ದೀಪ್‌ರಾಜ್ ಚಂದ್ರ ಬಂಧಿತ ಆರೋಪಿ. ಈತ ಬಿಇಎಲ್‌ನ…

ಉಡುಪಿಯಲ್ಲೊಂದು ಅಮಾನವೀಯ ಘಟನೆ: ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಉಡುಪಿ ಮಲ್ಪೆಯಲ್ಲೊಂದು ಅಮಾನವೀಯ ಘಟನೆ ನಡೆದಿದ್ದು ಕೇವಲ ಮೀನು ಕದ್ದ ಕಾರಣಕ್ಕೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ. ಉಡುಪಿಯ ಮಲ್ಪೆ ಮೀನುಗಾರಿಕ ಬಂದರಿನಲ್ಲಿ ಈ ಘಟನೆ ನಡೆದಿದ್ದು, ಕೃತ್ಯ ಎಸಗಿದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇವಲ ಮೀನು…

ಕಾರ್ಕಳ: ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ: ಸರ್ಕಾರದ ಯೋಜನೆಗಳಿಗೆ ವಿರೋಧಿಗಳ ಟೀಕೆಗೆ ಪ್ರಗತಿ ಸಾಧಿಸುವ ಮೂಲಕ ಉತ್ತರ ಕೊಡಬೇಕು: ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ

ಕಾರ್ಕಳ: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ವಿರೋಧಿಗಳ ಅಪಪ್ರಚಾರ, ಟೀಕೆಗಳು ನಿರೀಕ್ಷಿತ ಆದರೆ ಇಂತಹ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿದಾಗಲೇ ವಿರೋಧಿಗಳ ಟೀಕೆಗಳಿಗೆ ತಕ್ಕ ಉತ್ತರ ಸಿಕ್ಕಂತಾಗುತ್ತದೆ ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ…

ಮುಲ್ಕಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರು ಸವಾರರು ಮೃತ್ಯು

ಮುಲ್ಕಿ : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವನಪ್ಪಿದ ಘಟನೆ ಮುಲ್ಕಿ ಸಮೀಪದ ಬಟ್ಟಕೋಡಿ ಎಂಬಲ್ಲಿ ನಡೆದಿದೆ. ಧಾರವಾಡ ಸಮೀಪದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ(27) ಮತ್ತು ನವೀನ್ ಹೂಗಾರ (26) ಮೃತ…

ರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಕಟೀಲಿನಲ್ಲಿ ದ್ವಿದಿನ ಯಕ್ಷಗಾನ ತಾಳಮದ್ದಲೆ ಕಮ್ಮಟ

ಉಡುಪಿ : ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲೆಯೂ ಹೌದು, ಯಕ್ಷಗಾನದ ಶಕ್ತಿಯೂ ಹೌದು. ಯಕ್ಷಗಾನದ ಬೆಳವಣಿಗೆಗೆ ಕಟೀಲು…

ನಿಟ್ಟೆ ತಾಂತ್ರಿಕ ವಿದ್ಯಾಲಯದಲ್ಲಿ ಮಹಿಳಾ ದಿನಾಚರಣೆ- ಮಹಿಳಾ ದಿನಾಚರಣೆಯ ನೈಜ ಪರಿಕಲ್ಪನೆ ಜನರಲ್ಲಿ ಮೂಡುವುದು ಅತ್ಯಗತ್ಯ : ಡಾ. ಹರ್ಷ ಪ್ರಿಯಂವದಾ

ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಾ.18 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಜರುಗಿತು. ಮುಖ್ಯ ಅತಿಥಿಯಾಗಿ ಕಾರ್ಕಳ ಪೊಲೀಸ್ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ.ಹರ್ಷ ಪ್ರಿಯಂವದ ಭಾಗವಹಿಸಿ ಮಾತನಾಡಿ, ಕಾನೂನು ಜಾರಿಯಲ್ಲಿ ಮಹಿಳೆಯರ ಪಾತ್ರ ಮತ್ತು…