Month: May 2025

ರಾಜ್ಯದಲ್ಲಿ ಮದ್ಯದ ದರ ಮತ್ತೆ ಹೆಚ್ಚಳ: ಇಂದಿನಿಂದಲೇ ಜಾರಿಯಾಗಲಿದೆ ಪರಿಷ್ಕೃತ ದರ

ಬೆಂಗಳೂರು: ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎರಡು ಬಾರಿ ಮದ್ಯದ(Liquor) ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಮತ್ತೆ ಮೂರನೇ ಬಾರಿ ದರ ಹೆಚ್ಚಳವಾಗಿದ್ದು, ಇಂದಿನಿಂದಲೇ ಪರಿಷ್ಕೃತ ದರ ಜಾರಿಯಾಗಿದೆ. 2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ…

ರಾಜ್ಯದ ಸರ್ಕಾರಿ ಶಾಲಾ-ಕಾಲೇಜು ಅತಿಥಿ ಶಿಕ್ಷಕ ಹಾಗೂ ಉಪನ್ಯಾಸಕರ ಗೌರವಧನ ಹೆಚ್ಚಳ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ…

ಅತ್ತೂರು ಪರ್ಪಲೆಗಿರಿಯಲ್ಲಿ ಕಲ್ಕುಡ, ಕಲ್ಲುರ್ಟಿ, ತೂಕತ್ತರೀ  ಸಪರಿವಾರ ದೈವಗಳ ಗರ್ಭಗೃಹ ನಿರ್ಮಾಣಕಾರ್ಯ ಪೂರ್ಣ: ಮೇ 17 ರಿಂದ 19ರವರೆಗೆ ಧರ್ಮದೈವಗಳ ದೈವಬಿಂಬ ಪುನಃಪ್ರತಿಷ್ಠೆ, ಸಾನಿಧ್ಯ ಕಲಶೋತ್ಸವ, ದೈವಗಳ ಸಿರಿಸಿಂಗಾರ ನೇಮೋತ್ಸವ

ಕಾರ್ಕಳ: ಋಷಿ ಮುನಿಗಳ ತಪೋಭೂಮಿಯಾಗಿರುವ ಕಾರ್ಕಳದ ಪರ್ಪಲೆಗಿರಿಯಲ್ಲಿ ಕಾಲಾಂತರದಲ್ಲಿ ಭೂಗರ್ಭದಲ್ಲಿ ಹುದುಗಿಹೋಗಿದ್ದ ತುಳುನಾಡಿನ ಕಾರಣೀಕ ದೈವಗಳಾದ ಕಲ್ಕುಡ,ಕಲ್ಲುರ್ಟಿ ಹಾಗೂ ತೂಕತ್ತರೀ ದೈವಗಳು ಭಗವಂತನ ಇಚ್ಚೆಯನುಸಾರ ಮತ್ತೆ ಅವತರಿಸಿ ಗತವೈಭವವನ್ನು ಸಾರಲು ಸಜ್ಜಾಗಿದೆ. ಕರಿಯಕಲ್ಲು ಎಂದೇ ಪ್ರಸಿದ್ಧಿಪಡೆದಿರುವ ಕಾರ್ಕಳವು ಧರ್ಮಕಾರ್ಯದ ಪುಣ್ಯಭೂಮಿಯೂ ಹೌದು.…

ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ 6 ಕಡೆ ಅಧಿಕಾರಿಗಳ ಮನೆಗಳ ಮೇಲೆ ದಾಳಿ: ದಾಖಲೆ ಪತ್ರಗಳ ಪರಿಶೀಲನೆ

ಬೆಂಗಳೂರು: ಕರ್ನಾಟಕದಾದ್ಯಂತ ಸುಮಾರು 6 ಕಡೆಗಳಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮನೆಗಳು ಮತ್ತು ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳ ಮನೆ ಮತ್ತು…

ಪುಲ್ವಾಮಾದಲ್ಲಿ ಎನ್​ಕೌಂಟರ್​: ಮೂವರು ಉಗ್ರರ ಸೆರೆ

ಜಮ್ಮು&ಕಾಶ್ಮೀರ: ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಪುಲ್ವಾಮಾದಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರನ್ನು ಸೆರೆ ಹಿಡಿಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭಿಕ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ, ಸಂಘಟಿತ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು,…

ಕಾರ್ಕಳ ಸ್ಪಂದನ ಆಸ್ಪತ್ರೆಯಲ್ಲಿ ಮಹಿಳೆ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ:ಮೃತ ಮಹಿಳೆಯ ಸಂಬಂಧಿಕರಿಂದ ವೈದ್ಯರ ವಿರುದ್ಧ ಆಕ್ರೋಶ

ಕಾರ್ಕಳ:ಶಸ್ತ್ರಚಿಕಿತ್ಸೆ ನಡೆಸಿ ಹೊಟ್ಟೆಯಲ್ಲಿನ ಗಡ್ಡೆಯನ್ನು ಹೊರತೆಗೆಯುವ ಸಂದರ್ಭದಲ್ಲಿ ವಿಪರೀತ ರಕ್ತಸ್ರಾವದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳದ ಸ್ಪಂದನ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ.…

ನಿಟ್ಟೆ: ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾವು

ಕಾರ್ಕಳ: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಬೈಕ್ ಸವಾರ ಮೃತಪಟ್ಟಿದ್ದಾರೆ. ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರ (ಮೇ.13) ರಂದು ಈ ದುರ್ಘಟನೆ ಸಂಭವಿಸಿದ್ದು, ಶ್ರೇಯಾನ್‌ ಎಂಬಾತ ಬೈಕಿನಲ್ಲಿ ನಿಟ್ಟೆ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದಾಗ ನಿಟ್ಟೆ…

ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಸರ್ವಿಸ್ ನೀಡುತ್ತದೆ: ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್

ಬೆಂಗಳೂರು: ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಸಚಿವ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಗ್ಯ ಇಲಾಖೆಯಿಂದ ಈ ಮಹತ್ವದ…

ಕುಕ್ಕೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆಕುಡಿಯರಿಗೆ ಪ್ರಾತಿನಿಧ್ಯ: ಸಮುದಾಯದ ಹೋರಾಟಕ್ಕೆ ಸಂದ ಜಯ: ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ

ಕಾರ್ಕಳ:ರಾಜ್ಯದ ನಂಬರ್ ವನ್ ಧಾರ್ಮಿಕ ಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿಯಲ್ಲಿ ಈ‌ ಬಾರಿ ಮಲೆಕುಡಿಯ ಸಮುದಾಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆಕುಡಿಯ ಸಮಾಜದ ಮಹಿಳಾ ಪ್ರತಿನಿಧಿ ಸೌಮ್ಯ ಅವರು ವ್ಯವಸ್ಥಾಪನ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದು ಇದು ಮಲೆಕುಡಿಯ ಸಮುದಾಯದ…

ಭಾರತದ ವಿರುದ್ದ ಪಾಕಿಸ್ತಾನಕ್ಕೆ ಬೆಂಬಲಿಸಿದ ಟರ್ಕಿಗೆ ಮರ್ಮಾಘಾತ: ಟರ್ಕಿಯಿಂದ ಆಮದಾಗುತ್ತಿದ್ದ ಶೇ 70 ರಷ್ಟು ಮಾರ್ಬಲ್ ನಿಷೇಧ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಟರ್ಕಿಯು ಪಾಕಿಸ್ತಾನದ ಪರವಾಗಿ ನಿಂತಿದ್ದಕ್ಕಾಗಿ ಉದಯಪುರ ಅಮೃತಶಿಲೆ ವ್ಯಾಪಾರಿಗಳು ಟರ್ಕಿಯೊಂದಿಗಿನ ಎಲ್ಲಾ ವ್ಯವಹಾರವನ್ನು ಕೊನೆಗೊಳಿಸಿದ್ದಾರೆ. ಉದಯಪುರ ಮಾರ್ಬಲ್ ಪ್ರೊಸೆಸರ್ಸ್ ಸಮಿತಿಯ ಅಧ್ಯಕ್ಷ ಕಪಿಲ್ ಸುರಾನಾ ಈ ಕುರಿತು ಪ್ರತಿಕ್ರಿಯಿಸಿದ್ದು, “ಉದಯಪುರವು…