Month: June 2025

ಹೆಬ್ರಿ: ವ್ಯಕ್ತಿ ನಾಪತ್ತೆ

ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು. ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು…

ಬೆಂಗಳೂರು ಕಾಲ್ತುಳಿತ ಪ್ರಕರಣ ಸಿಐಡಿಗೆ: ಕಮಿಷನರ್, ಎಸಿಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರಿನ ಎಂ,ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೂನ್ 05 ರಾತ್ರಿ ತುರ್ತು ಸುದ್ದಿಗೋಷ್ಠಿ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುತ್ತಿರುವುದಾಗಿ ಘೋಷಣೆ ಮಾಡಿದರು. ಅಲ್ಲದೇ ಪ್ರಮುಖವಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ…

ನಿಟ್ಟೆ: ಕಚ್ಚಾ ಗೋಡಂಬಿ ನೀಡುವುದಾಗಿ ಹಣ ಪಡೆದು 17 ಲಕ್ಷಕ್ಕೂ ಮಿಕ್ಕಿ ವಂಚನೆ

ಕಾರ್ಕಳ: ಕಾರ್ಕಳದ ನಿಟ್ಟೆಯ ಗೇರುಬೀಜ ರಪ್ತು ಉದ್ದಿಮೆದಾರರೊಬ್ಬರಿಗೆ ಕಚ್ಚಾ ಗೇರುಬೀಜ ನೀಡುವುದಾಗಿ ಲಕ್ಷಾಂತರ ರೂ. ವಂಚನೆ ಎಸಗಿರುವ ಪ್ರಕರಣ ನಡೆದಿದೆ. ನಿಟ್ಟೆಯ ಬಿ ಶ್ರೀನಿವಾಸ ಅವರು M/S ಗಾಯತ್ರಿ ಎಕ್ಸ್ ಪೋರ್ಟ್ಸ್, ಗುಂಡ್ಯಡ್ಕ ಅತ್ತೂರು ನಾರ್ತ್, ಇದರ ಮ್ಯಾನೆಜಿಂಗ್ ಪಾರ್ಟನರ್ ಆಗಿದ್ದು…

ಬಿಜೆಪಿ ಮುಖಂಡ,ಪುತ್ತೂರು ನಗರ ಸಭೆಯ ಸದಸ್ಯನ ಶವ ನೀರಿನ ಟ್ಯಾಂಕಿನಲ್ಲಿ ಪತ್ತೆ: ರಮೇಶ್ ರೈ ಸಾವಿನ ಸುತ್ತ ಅನುಮಾನಗಳ ಹುತ್ತ

ಮಂಗಳೂರು: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಬಿಜೆಪಿ ಮುಖಂಡ ಹಾಗೂ ಪುತ್ತೂರು ನಗರ ಸಭೆಯ ಸದಸ್ಯ ರಮೇಶ್ ರೈ ಅವರು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ರಮೇಶ್ ರೈ ಮನೆಯಿಂದ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಬಳಿ…

ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

ಬೆಂಗಳೂರು: 2025 ರ ಐಪಿಎಲ್ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡದ ವಿಜಯೋತ್ಸವ ಆಚರಣೆಯ ಮೊದಲು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಸಂಭವಿಸಿದ ಕಾಲ್ತುಳಿತದಿಂದ 11 ಅಮಾಯಕ ಜೀವಗಳು ಬಲಿಯಾದ ಘಟನೆಯ ಕುರಿತು ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.…

ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿ ಮೃತ್ಯು: ವೈದ್ಯರ ನಿರ್ಲಕ್ಷ್ಯ ಆರೋಪ

ನಾರಾವಿ: ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದ ನಾರಾವಿಯ ಗರ್ಭಿಣಿ ಮಹಿಳೆ ಹೆರಿಗೆಯ ಸಂದರ್ಭದಲ್ಲಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಎಂಬವರ ಪತ್ನಿ ಮಧುರಾ (29ವ) ಮೃತಪಟ್ಟ ಬಾಣಂತಿ ಮಹಿಳೆ.ಅವರಿಗೆ ಮೂರುವರೆ ವರ್ಷದ…

ಕಾರ್ಕಳ: ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಸವಲತ್ತುಗಳಿಗೆ ಅರ್ಜಿ ಆಹ್ವಾನ

ಕಾರ್ಕಳ: ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಕಾರ್ಕಳ ತಾಲೂಕಿನಲ್ಲಿ ಅನುಷ್ಠಾನಗೊಳ್ಳಲಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಆಸಕ್ತ ರೈತರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2025-26ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ ಯೋಜನೆಯಡಿ ರೈತರಿಗೆ ಕಂದು ಬಾಳೆ, ಅಂಗಾAಶ ಬಾಳೆ, ಗೇರು, ಕೊಕ್ಕೋ,…

ಶಿಸ್ತು ಮತ್ತು ಕ್ರಮಭರಿತ ಅಧ್ಯಯನದಿಂದ ವಿದ್ಯಾರ್ಥಿಗಳ ಕಲಿಕೆ ಸಾಧ್ಯ: ಪ್ರೊ.ಬಿ ಪದ್ಮನಾಭ ಗೌಡ

ಕಾರ್ಕಳ: ವಿದ್ಯಾರ್ಥಿಗಳು ತಮ್ಮ ಅಧ್ಯಯನದೊಂದಿಗೆ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಉತ್ತಮ ಗುರಿಯನ್ನು ಹೊಂದಿ ಹೆತ್ತವರ ಋಣ ತೀರಿಸಬೇಕು. ಕೆ.ಎಂ.ಇ.ಎಸ್ ವಿದ್ಯಾಸಂಸ್ಥೆಯು ಎಲ್ಲಾ ರೀತಿಯ ಸೌಲಭ್ಯವನ್ನು ಹೊಂದಿರುವುದರಿAದ ಅದನ್ನು ಸರಿಯಾಗಿ ಉಪಯೋಗಿಸಿಕೊಂಡು ಕಲಿತು ಉತ್ತಮ ವ್ಯಕ್ತಿಗಳಾಗಿ ಹೊರಗೆ ಬರಬೇಕು. ಆಂಗ್ಲಭಾಷೆ ಅಂತರಾಷ್ಟಿçÃಯ ಭಾಷೆ ಇದರಿಂದ…

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತಕ್ಕೆ ರಾಜ್ಯ ಸರ್ಕಾರ ನೇರ ಹೊಣೆ: ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದಾರೆ ಮತ್ತು 47 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ವಿಪಕ್ಷ ನಾಯಕ ಆರ್ ಅಶೋಕ್ ಆರ್‌ಸಿಬಿ ತಂಡಕ್ಕೆ ಅಭಿನಂದನೆ ಸಲ್ಲಿಸಿ, ಸಂಭ್ರಮಿಸಬೇಕಾದ ಘಳಿಗೆಯನ್ನು ಸೂತಕದ…

ನಿಟ್ಟೆ; ಸ್ಕೂಟರಿಗೆ ಕಾರು ಡಿಕ್ಕಿ: ಸವಾರೆ ಸ್ಥಳದಲ್ಲೇ ಸಾವು

ಕಾರ್ಕಳ: ಕಾರು ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರೆ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಸರ್ಕಾರಿ ಆಸ್ಪತ್ರೆಯ ಬಳಿ ಬುಧವಾರ ಸಂಜೆ ಸಂಭವಿಸಿದೆ. ನಿಟ್ಟೆ ಕುಡಾರಿಕು ಗುಂಡಲ್ಕೆ ನಿವಾಸಿ ಯಶವಂತಿ ಶೆಟ್ಟಿ(45) ಎಂಬವರು ಮೃತಪಟ್ಟವರು‌.ಅವರು ಕಾರ್ಕಳದಿಂದ…