Month: July 2025

ಮೂಡುಬಿದಿರೆ ಕಾಲೇಜು ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರ ಸೇರಿ ಮೂವರಿಂದ ಗ್ಯಾಂಗ್‌ರೇಪ್ ಆರೋಪ: ಬೆಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಹಾಗೂ ಮತ್ತೋರ್ವ ವಿದ್ಯಾರ್ಥಿ ಸೇರಿ ಮೂವರು ನಿರಂತರ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅತ್ಯಾಚಾರ ಪ್ರಕರಣದ…

ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ಜಾಗ ಕಬಳಿಸಿದ ವ್ಯಕ್ತಿಯನ್ನೇ ವ್ಯವಸ್ಥಾಪನ ಸಮಿತಿಯ ಸದಸ್ಯನಾಗಿ ಆಯ್ಕೆ ಮಾಡಿದ ಆರೋಪ: ಸಮಿತಿಯ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಅಧ್ಯಕ್ಷ ಉದ್ಯಮಿ ಶಿವರಾಮ ಶೆಟ್ಟಿ

ಕಾರ್ಕಳ: ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ ಹಾಗೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮುಗಿದ ಬೆನ್ನಲ್ಲೇ, ಹಾಲಿ ವ್ಯವಸ್ಥಾಪನ ಸಮಿತಿಯ ಸದಸ್ಯರು ಹಾಗೂ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರಾದ ಅಜೆಕಾರು ದೇವಸ ಶಿವರಾಮ ಶೆಟ್ಟಿಯವರು ತಮ್ಮ…

ಭೂಮಿಗೆ ಯಶಸ್ವಿಯಾಗಿ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ: ಕ್ಯಾಲಿಫೋರ್ನಿಯಾದಲ್ಲಿ ಆಕ್ಸಿಯಂ ನೌಕೆ ಲ್ಯಾಂಡ್

ಕ್ಯಾಲಿಪೋರ್ನಿಯ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಬಂದಿಳಿದಿದ್ದಾರೆ. ಶುಭಾಂಶು ಶುಕ್ಲಾ 18 ದಿನಗಳನ್ನು ಬಾಹ್ಯಾಕಾಶದಲ್ಲಿ ಕಳೆದು ಇದೀಗ ಹಿಂದಿರುಗಿದ್ದು, ಎಲ್ಲೆಡೆ ಸಂತಸ ಮನೆ ಮಾಡಿದೆ. ಜುಲೈ 14 ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ಬೇರ್ಪಟ್ಟ ನಂತರ…

ಮಾಳ: ಎದೆನೋವಿನಿಂದ ವ್ಯಕ್ತಿ ಸಾವು

ಕಾರ್ಕಳ: ತಾಲೂಕಿನ ಮಾಳ ನಿವಾಸಿಯೊಬ್ಬರು ಎದೆನೋವಿನಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. ಸಂಜೀವ (58)ಮೃತಪಟ್ಟ ದುರ್ದೈವಿ. ಮಾಳದ ತನ್ನ ಸಹೋದರಿಯ ಮನೆಯಲ್ಲಿ ವಾಸವಿದ್ದ ಮೃತ ಸಂಜೀವ ಅವರು ಸೋಮವಾರ ಸಂಜೆಯ ವೇಳೆಗೆ ಮನೆಯಲ್ಲಿ ವಾಂತಿ ಮಾಡಿಕೊಂಡು ಎದೆನೋವಿನಿಂದ ತೀವೃ ಅಸ್ವಸ್ಥಗೊಂಡಿದ್ದರು.ಕೂಡಲೇ ಸಹೋದರಿಯ…

ನಿಟ್ಟೆ ಹಾಸ್ಟೆಲ್ ನಲ್ಲಿ ವಿವಾದಾತ್ಮಕ ಗೋಡೆ ಬರಹ ಪ್ರಕರಣ: ಆರೋಪಿ ಕೇರಳ ಮೂಲದ ವಿದ್ಯಾರ್ಥಿನಿ ಬಂಧನ

ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ ಕಾಲೇಜು ಮಹಿಳಾ ಹಾಸ್ಟೆಲ್ ನ ಗೋಡೆಯ ಮೇಲೆ ವಿವಾದಾತ್ಮಕ ಬರಹಕ್ಕೆ ಸಂಬಂಧಿಸಿದಂತೆ ಆರೋಪಿ ಕೇರಳ ಮೂಲದ ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ನಿಟ್ಟೆ ಕಾಲೇಜಿನ ವಿದ್ಯಾರ್ಥಿನಿ ಕೇರಳ ಕಾಸರಗೋಡು ಜಿಲ್ಲೆಯ ಫಾತಿಮಾ ಶಬ್ನಾ (21)ಬಂಧಿತ ಆರೋಪಿ. ಕಳೆದ…

ಪೆರ್ವಾಜೆ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ: ಪೆರ್ವಾಜೆ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ನಡೆಯಿತು. ವಿದ್ಯಾಭಿಮಾನಿಗಳೂ ಹಿರಿಯರೂ ಆದ…

ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ನೇಮಕ

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್​ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಕೇಂದ್ರ ಸರ್ಕಾರವು ಸೋಮವಾರ (ಜುಲೈ.14) ಆದೇಶ ಹೊರಡಿಸಿದೆ. ವಿಭು ಬಖ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿದ್ದರು. ಕರ್ನಾಟಕ ಹೈಕೋರ್ಟ್​ ಮಾತ್ರವಲ್ಲದೆ, ಮಧ್ಯಪ್ರದೇಶ, ಜಾರ್ಖಂಡ್, ಗುವಾಹಟಿ…

ಫೈಬರ್ ಪ್ರತಿಮೆ ಎಂದು ಸುಳ್ಳು, ಅಪಪ್ರಚಾರ ಮಾಡಿದವರ ಬಣ್ಣ ಬಯಲಾಗಿದೆ: ಪರಶುರಾಮ ಥೀಮ್ ಪಾರ್ಕ್ ವಿವಾದದ ಕುರಿತು ಕಾಂಗ್ರೆಸ್ ವಿರುದ್ಧ ಶಾಸಕ ಸುನಿಲ್ ಕುಮಾರ್ ಆಕ್ರೋಶ

ಕಾರ್ಕಳ:ಪರಶುರಾಮ ಥೀಂ ಪಾರ್ಕ್ ಹಾಗೂ ಪ್ರತಿಮೆಯ ಬಗ್ಗೆ ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅವಮಾನಕ್ಕೆ ಸೋಲಾಗಿದೆ. ಪರಶುರಾಮನ ಪ್ರತಿಮೆ ಫೈಬರ್’ನದ್ದು ಎಂದು ನಡೆಸುತ್ತಿದ್ದ ಟೂಲ್ ಕಿಟ್ ಮೂಲಕ ಸುಳ್ಳು, ಅಪಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಪಕ್ಷದವರ ಬಣ್ಣ ಪೊಲೀಸ್ ತನಿಖೆಯಿಂದಲೇ ಸಾಬೀತಾಗಿದೆ ಎಂದು ಕಾರ್ಕಳ…

ಪರಶುರಾಮ ಪ್ರತಿಮೆ ಕಂಚಿನದಲ್ಲ, ಬದಲಿಗೆ ಹಿತ್ತಾಳೆ ಪ್ರತಿಮೆ: ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ ಉಲ್ಲೇಖ: ಸುಳ್ಳಾಯಿತೇ ಫೈಬರ್ ಪ್ರತಿಮೆ ವಾದ?

ಕಾರ್ಕಳ:ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಸ್ಥಾಪಿಸಲಾಗಿರುವ ಪರಶುರಾಮ ಪ್ರತಿಮೆ ಕಂಚಿನದಲ್ಲ ಬದಲಾಗಿ ಹಿತ್ತಾಳೆ ಪ್ರತಿಮೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಪೊಲೀಸರ ತನಿಖೆಯಿಂದ ಫೈಬರ್ ಪ್ರತಿಮೆ ಎನ್ನುವ ವಾದದಲ್ಲಿ ಯಾವುದೇ ಹುರುಳಿಲ್ಲ ಎನ್ನುವುದು ಸಾಬೀತಾಗಿದೆ. ಕ್ರಿಶ್ ಆರ್ಟ್ ವರ್ಲ್ಡ್…

ಅಜೆಕಾರು: ಹೃದಯಾಘಾತದಿಂದ ಮಹಿಳೆ ಸಾವು

ಕಾರ್ಕಳ: ತೀವ್ರ ಎದೆನೋವು ಕಾಣಿಸಿಕೊಂಡ ಮಹಿಳೆಯೊಬ್ಬರು ಮನೆಯಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಅಜೆಕಾರಿನಲ್ಲಿ ಸಂಭವಿಸಿದೆ. ಅಜೆಕಾರು ಕೊಂಬಗುಡ್ಡೆ ನಿವಾಸಿ ಸುರೇಶ್ ಎಂಬವರ ಪತ್ನಿ ಮೈನಾ( 34 ವರ್ಷ)ಎಂಬವರು ಮೃತಪಟ್ಟ ಮಹಿಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈನಾ ಅವರಿಗೆ ಭಾನುವಾರ ರಾತ್ರಿ 8 ಗಂಟೆಗೆ…