Month: July 2025

ಮುನಿಯಾಲು ಸಮೀಪದ ಮುಟ್ಲುಪಾಡಿಯಲ್ಲಿ ಕೃಷಿ ತೋಟಗಳಿಗೆ ಲಗ್ಗೆಯಿಟ್ಟ ಆನೆ: ಅಪಾರ ಕೃಷಿ ಬೆಳೆ ನಾಶ

ವರದಿ,ಚಿತ್ರಕೃಪೆ: ಸಾಯಿಪ್ರಕಾಶ್ ಸ್ಟುಡಿಯೋ, ಮುನಿಯಾಲು ಹೆಬ್ರಿ: ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುಟ್ಲುಪಾಡಿಯಲ್ಲಿ ಕಳೆದ ಹಲವು ದಿನಗಳಿಂದ ಒಂಟಿ ಸಲಗದ ಓಡಾಟ ಕಂಡುಬಂದಿದ್ದು, ಸ್ಥಳೀಯ ನಾಗರಿಕರಲ್ಲಿ ಭಯದ ವಾತಾವರಣ ಮೂಡಿಸಿದೆ. ಮುಟ್ಲುಪಾಡಿ ಮೂಡುದರ್ಖಾಸು ನಾಗಯ್ಯ ನಾಯ್ಕ್ ಎಂಬವರ ಅಡಿಕೆ ಹಾಗೂ ಬಾಳೆ…

ಉಡುಪಿ ಜ್ಞಾನಸುಧಾದಲ್ಲಿ ಆಂಗ್ಲಭಾಷಾ ಉಪನ್ಯಾಸಕರ ಕಾರ್ಯಾಗಾರ

ಉಡುಪಿ: ವಿದ್ಯಾರ್ಥಿಗಳಲ್ಲಿ ಹೊಂದಾಣಿಕೆ, ಪ್ರಾಮಾಣಿಕತೆ, ನೈತಿಕತೆಗಳನ್ನು ಬೆಳೆಸುವ ಉಪನ್ಯಾಸಕರಾಗಿರಿ. ಈ ಕಾರ್ಯಾಗಾರದ ಸದುಪಯೋಗವನ್ನು ಪಡೆದು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರಿ ಎಂದು ಉಡುಪಿ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ)ಯಉಪನಿರ್ದೇಶಕರಾದ ಮಾರುತಿ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಪದವಿಪೂರ್ವ ಕಾಲೇಜು…

ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ; ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರು

ಮಂಡ್ಯ: ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ವಾಪಸ್​​ ಬೆಂಗಳೂರಿಗೆ ಬರುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ​ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ವ್ಯಾಪ್ತಿಯ ಗೌಡಹಳ್ಳಿ ಟಿಎಂ…

ಕಾರ್ಕಳ: ದಲಿತರ ಭೂಮಿ – ವಸತಿ ಹಕ್ಕಿಗಾಗಿ ಪ್ರತಿಭಟನೆ: ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ, ಕಂದಾಯ ಸಚಿವರಿಗೆ ಮನವಿ

ಕಾರ್ಕಳ : ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ದಲಿತರ ಭೂಮಿ – ವಸತಿ ಹಕ್ಕಿಗಾಗಿ ಮತ್ತು ಇತರೆ ಬೇಡಿಕೆಗಳ ಈಡೇರಿಕೆಗಾಗಿ ಕಾರ್ಕಳ ತಾಲೂಕು ಶಾಖೆ ನೇತೃತ್ವದಲ್ಲಿ ಜು. 18ರಂದು ಕಾರ್ಕಳ ತಾಲೂಕು ಕಚೇರಿ ಮುಂಭಾಗವೂ ಪ್ರತಿಭಟನೆ ನಡೆಯಿತು. ಬಳಿಕ ತಹಶೀಲ್ದಾರ್ ಮೂಲಕ…

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ ಆರಂಭ

ಬೆಂಗಳೂರು: ಸಂಸತ್ತಿನ ಮುಂಗಾರು ಅಧಿವೇಶನ ಇದೇ ಜುಲೈ 21ರಿಂದ ಆರಂಭವಾಗಲಿದ್ದು, ಇತ್ತ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಭಾರತ ಸಂವಿಧಾನದ 174ನೇ…

ಅತ್ಯಾಚಾರ ಪ್ರಕರಣ: ತೀರ್ಪು ಕಾಯ್ದಿರಿಸಿದ ಕೋರ್ಟ್; ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಅತ್ಯಾಚಾರ ಪ್ರಕರಣಗಳಲ್ಲಿ ಒಂದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಪೂರ್ಣಗೊಳಿಸಿದ್ದು, ತೀರ್ಪನ್ನು ಜುಲೈ 30ಕ್ಕೆ ಕಾಯ್ದಿರಿಸಿದೆ. ಪ್ರಾಸಿಕ್ಯೂಷನ್ ಪರ SPP ಬಿ.ಎನ್.ಜಗದೀಶ್, ಅಶೋಕ್ ನಾಯ್ಕ್ ವಾದ ಮಂಡಿಸಿದ್ದರೆ,…

ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಔಷಧಿ ಖರೀದಿಗೆ ಸಹಾಯಧನ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಕಾರ್ಕಳ: ಅಡಿಕೆ ಬೆಳೆಗೆ ಇತ್ತೀಚಿನ ವರ್ಷಗಳಲ್ಲಿ ಭಾಧಿಸುತ್ತಿರುವ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಪೋಷಕಾಂಶಗಳ ನಿರ್ವಹಣೆ, ಸ್ವಚ್ಛತೆ ನಿರ್ವಹಣೆಗಳೊಂದಿಗೆ ಶಿಫಾರಸ್ಸು ಮಾಡಿದ ರಾಸಾಯನಿಕಗಳ ಸಿಂಪರಣೆಯು ಸಹ ಒಂದು ಕ್ರಮವಾಗಿದ್ದು, ರೈತರು ತಮ್ಮ ಅಡಿಕೆ ತೋಟಗಳಲ್ಲಿ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶಿಫಾರಸ್ಸು ಮಾಡಲಾದ ರಾಸಾಯನಿಕ…

ಹೆಬ್ರಿ: ದಲಿತರ ಭೂಮಿ–ವಸತಿ ಹಕ್ಕಿಗಾಗಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ

ಹೆಬ್ರಿ.ಜು.18: ದಲಿತರ ಭೂಮಿ ಮತ್ತು ವಸತಿ ಹಕ್ಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯ ವತಿಯಿಂದ ಹೆಬ್ರಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಹಕ್ಕೊತ್ತಾಯದ ಪ್ರತಿಭಟನೆ ನಡೆಯಿತು. ಹೆಬ್ರಿ ಶಾಖೆಯ ನೇತೃತ್ವದಲ್ಲಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ,…

ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ವಿಳಂಬ ಕುರಿತು ದೂರು: ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ

ಕಾರ್ಕಳ:ಸಾರ್ವಜನಿಕರ ಕಡತಗಳ ವಿಲೇವಾರಿಯಲ್ಲಿ ಕಾರ್ಕಳ ಪುರಸಭೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎನ್ನುವ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಶುಕ್ರವಾರ ಕಾರ್ಕಳ ಪುರಸಭೆ ಕಚೇರಿಗೆ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ ಅವರ ನೇತೃತ್ವದಲ್ಲಿ ಶುಕ್ರವಾರ ದಿಢೀರ್ ಭೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿದರು.ಈ ವೇಳೆ ಕಳೆದ 10…

ಜುಲೈ.27ರಂದು ಅಜೆಕಾರಿನಲ್ಲಿ ಆಟಿಡೊಂಜಿ ಕೆಸರ್ದ ಗೊಬ್ಬು -2025

ಅಜೆಕಾರು: ಶ್ರೀ ವಿಷ್ಣು ಫ್ರೆಂಡ್ಸ್ ಅಜೆಕಾರು ಹಾಗೂ ಶ್ರೀ ವಿಷ್ಣು ಮಹಿಳಾ ಘಟಕ ಅಜೆಕಾರು ಇವರ ಜಂಟಿ ಆಶ್ರಯದಲ್ಲಿ ಮರ್ಣೆ ಗ್ರಾಮದ ಹಿಂದೂ ಬಾಂಧವರಿಗಾಗಿ ಮೂರನೇ ವರ್ಷದ “ಆಟಿಡೊಂಜಿ ಕೆಸರ್ದ ಗೊಬ್ಬು” ಜುಲೈ 27 ರಂದು ಭಾನುವಾರ ಅಜೆಕಾರು ಶ್ರೀ ಮಹಾವಿಷ್ಣುಮೂರ್ತಿ…