Month: August 2025

ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ: ಇಡಿ ತನಿಖೆಗೆ ಆಗ್ರಹಿಸಿ ಅಮಿತ್ ಶಾಗೆ ಕೋಟ ಶ್ರೀನಿವಾಸ ಪೂಜಾರಿ ಪತ್ರ

ನವದೆಹಲಿ, ಆಗಸ್ಟ್ 20: ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್​ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಕೋರಿ ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ…

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸ್ಟಾಪ್ ಫಾರ್ ವೋಟ್ ಚೋರಿ ಜನಜಾಗೃತಿ ಅಭಿಯಾನ

ಉಡುಪಿ, ಆ.20: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ನೇತೃತ್ವದಲ್ಲಿ ರಾಷ್ಟ್ರ ವ್ಯಾಪಿ ನಡೆಯುತ್ತಿರುವ “ಸ್ಟಾಪ್ ವೋಟ್ ಚೊರಿ” ಸ್ಟಿಕ್ಕರ್ ಜನಜಾಗೃತಿ ಅಭಿಯಾನ ನಡೆಯಿತು. ಉಡುಪಿ ಬಸ್ ನಿಲ್ದಾಣ, ಉಡುಪಿ ತಾಲೂಕು ಕಚೇರಿ,ಚುನಾವಣಾ ಕಚೇರಿ ,ಉಡುಪಿ ನಗರಸಭೆ,…

ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ: ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಆ.20(ವಿಧಾನಸಭೆ): ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ…

ಹಿರ್ಗಾನ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯ ವ್ಯಕ್ತಿಯೊಬ್ಬರು ಆ.19 ಮಂಗಳವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾನಂಗಿಯ ಸಂಪತ್ ಅವರ ತಂದೆ ಮಂಜುನಾಥ ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ ಅವರು ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದು ಕಾರ್ಕಳ ರೋಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.…

ಸೂರಾಲು: ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ “ಕ್ರೀಡೋತ್ಸವ 2025”

ಕಾರ್ಕಳ: ಸೂರಾಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯಲಿರುವ 33ನೇ ಸಾರ್ವಜನಿಕ ಗಣೇಶೋತ್ಸವದ ಪ್ರಯುಕ್ತ ಸೂರಾಲು ಗುಂಡಾಜೆ ಶಾಲಾ ಮೈದಾನದಲ್ಲಿ “ಕ್ರೀಡೋತ್ಸವ 2025 ಆ. 17ರಂದು ಜರುಗಿತು. ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಮಿಯ್ಯಾರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ…

ಜೆಸಿಐ ಕಾರ್ಕಳ ರೂರಲ್ ವತಿಯಿಂದ ವ್ಯಕ್ತಿತ್ವ ನಿರ್ಮಾಣ ಮತ್ತು ನಾಯಕತ್ವ ಕೌಶಲ್ಯ ವಿಕಸನ  ತರಬೇತಿ ಕಾರ್ಯಕ್ರಮ

ಕಾರ್ಕಳ: ವ್ಯಕ್ತಿತ್ವ ವಿಕಸನಕ್ಕೆ ತರಬೇತಿಗಳ ಸಪ್ತಾಹದ ಹೂರಣ ಇದರ ಅಂಗವಾಗಿ ಆಹಾರ -ವಿಹಾರ-ಆಚಾರ-ವಿಚಾರಗಳ ಮೂಲಕ ವ್ಯಕ್ತಿತ್ವ ನಿರ್ಮಾಣ ಮತ್ತು ಚಟುವಟಿಕೆಗಳ ಮೂಲಕ ನಾಯಕತ್ವ ಕೌಶಲ್ಯ ವಿಕಸನ ಕುರಿತ ಮೊದಲ ವಿಶೇಷ ತರಬೇತಿ ಕಾರ್ಯಕ್ರಮ ಕಾಬೆಟ್ಟು ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ…

ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಫೈನಲ್: ಎಡಗೈ, ಬಲಗೈ ಸಮುದಾಯಕ್ಕೆ ತಲಾ ಶೇ.6 , ಇತರೆಗೆ ಶೇ.5ರಷ್ಟು ಮೀಸಲಾತಿ!

ಬೆಂಗಳೂರು: ಕರ್ನಾಟಕದಲ್ಲಿ ದಲಿತ ಸಮುದಾಯಕ್ಕೆ ಒಳ ಮೀಸಲಾತಿ ಬಹುತೇಕ ಫೈನಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಎಲ್ಲಾ ಪರಿಶಿಷ್ಟ ಜಾತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸುವ ತೀರ್ಮಾನವಾಗಿದೆ. ನ್ಯಾಯಮೂರ್ತಿ ನಾಗಮೋಹನ್ ದಾಸ್…

ಧರ್ಮಸ್ಥಳ ಪ್ರಕರಣ: ಎಫ್​ಎಸ್​ಎಲ್ ವರದಿ ಬಂದ ಬಳಿಕ ಮತ್ತೆ ಮೂಳೆಗಾಗಿ ಶೋಧ ಸಾಧ್ಯತೆ

ಮಂಗಳೂರು, ಆಗಸ್ಟ್ 20 ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ನೀಡಿದ ದೂರಿನ ಆಧಾರದಲ್ಲಿ 16 ದಿನ 17 ಪಾಯಿಂಟ್‌ಗಳಲ್ಲಿ ಅಗೆದಿದ್ದ ಎಸ್‌ಐಟಿ ತಂಡಕ್ಕೆ ಎರಡು ಕಡೆ ಮಾತ್ರ ಅಸ್ಥಿಪಂಜರದ ಕುರುಹು ಸಿಕ್ಕಿತ್ತು. ನಂತರ ಧರ್ಮಸ್ಥಳ ಪ್ರಕರಣ ವಿಧಾನಸಭೆ ಕಲಾಪದಲ್ಲೂ ಸದ್ದು…

ಪ್ರಾಕೃತಿಕ ವಿಕೋಪದಿಂದಾದ ಹಾನಿಗೆ ತುರ್ತು ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಶಾಸಕ ವಿ ಸುನಿಲ್‌ ಕುಮಾರ್ ಮನವಿ‌

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಹಾಗೂ ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಆ.18 ರಂದು ಅತಿಯಾದ ಮಳೆ ಹಾಗೂ ಸುಂಟರ ಗಾಳಿಯಿಂದಾಗಿ ಸುಮಾರು ನೂರಕ್ಕೂ ಹೆಚ್ಚಿನ ವಾಸದ ಮನೆಗಳಿಗೆ ಹಾನಿಯಾಗಿದ್ದು, ಬೆಳೆ ಹಾನಿ ಸೇರಿದಂತೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಪಾರ ಹಾನಿ…

ಆ.21 ರಂದು ಕಾರ್ಕಳ ಜ್ಞಾನಸುಧಾದಲ್ಲಿ ಸಂಸ್ಥಾಪಕರ ಜನ್ಮ ದಿನಾಚರಣೆ, ರಕ್ತದಾನ ಶಿಬಿರ, ಸಾಮಾಜಿಕ ನೆರವು ಕಾರ್ಯಕ್ರಮ

ಕಾರ್ಕಳ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ…