Month: September 2025

ಕಾರ್ಕಳದಲ್ಲಿ ಗ್ಯಾರಂಟಿ ಸಮಾವೇಶ ಹಾಗೂ ಗ್ಯಾರಂಟಿ ಅದಾಲತ್: ಸದಾ ಬಡವರ ಬಗ್ಗೆ ಚಿಂತಿಸುವ ಪಕ್ಷ ಕಾಂಗ್ರೆಸ್: ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ,ಸೆ 12: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿ ಇಂದು ಬೇರೆ ರಾಜ್ಯಗಳಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌…

ನೀರೆ ಕಣಂಜಾರು ಗ್ರಾಮ ಪಂಚಾಯತ್ ಗ್ರಾಮ ಸೌಧ ಉದ್ಘಾಟನೆ: ಮಹಿಳಾಸ್ನೇಹಿ ನೀರೆ ಗ್ರಾಮ ಪಂಚಾಯತ್ ಕಟ್ಟಡ ರಾಜ್ಯಕ್ಕೆ ಮಾದರಿ: ಉಡುಪಿ ಜಿಲ್ಲೆಯಲ್ಲಿನ ಕೆಂಪು ಕಲ್ಲಿನ ಸಮಸ್ಯೆ ಹಾಗೂ 9/11 ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಕಾರ್ಕಳ, ಸೆ,12: ಗ್ರಾಮ ಪಂಚಾಯತಿ ಮಟ್ಟದಲ್ಲಿ ಜನ ಸಾಮಾನ್ಯರಿಗೆ ಉತ್ತಮ ಸೇವೆಗಳು ಲಭಿಸಿದಾಗ, ಸರ್ಕಾರದ ಮಟ್ಟದಲ್ಲೂ ತ್ವರಿತಗತಿಯಲ್ಲಿ ಕೆಲಸಗಳಾಗುತ್ತವೆ. ಇದರಿಂದ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ ಕನಸು ನನಸಾಗಲು ಸಾಧ್ಯ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.…

ರಾಜ್ಯ ಸರ್ಕಾರಕ್ಕೆ ಹಿಂದೂ ವಿರೋಧಿ ಪಟ್ಟ ಕಟ್ಟುವ ಯತ್ನ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಜ್ಯ ಸರ್ಕಾರದ ಜನಪ್ರಿಯತೆಯನ್ನು ಸಹಿಸದ ಬಿಜೆಪಿ ನಾಯಕರು ಅನಾವಶ್ಯಕವಾಗಿ ಅಪಪ್ರಚಾರ ಮಾಡುತ್ತಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಕೆಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪಿಸಿದರು. ಅವರು ಇಂದು ಕಾರ್ಕಳ ತಾಲೂಕಿನ ನೀರೆ ಗ್ರಾಮ…

ಸೆ.22 ರಿಂದ ಅ.7 ರವರೆಗೆ ಜಾತಿಗಣತಿ ಮರು ಸಮೀಕ್ಷೆಗೆ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿಗಣತಿ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೆ.22ರಿಂದ ಜಾತಿಗಣತಿ ಮರು…

ಬ್ರಹ್ಮಾವರ: ಮದುವೆಯಾಗಲು ನಿರಾಕರಿಸಿದ ಯುವತಿಗೆ ಚೂರಿ ಇರಿತ

ಬ್ರಹ್ಮಾವರ, ಸೆ.12: ಮದುವೆಗೆ ನಿರಾಕರಿಸಿದ ಕಾರಣಕ್ಕೆ ತಾನು ಪ್ರೀತಿಸಿದ ಪಕ್ಕದ ಮನೆಯ ಯುವತಿಯನ್ನು ಚೂರಿಯಿಂದ ಇರಿದು ಯುವಕನೊಬ್ಬ ಗಂಭೀರವಾಗಿ ಗಾಯಗೊಳಿಸಿದ ಘಟನೆ ಇಂದು (ಸೆ.12) ಬೆಳಿಗ್ಗೆ ಕೊಕ್ಕರ್ಣೆಯಲ್ಲಿ ನಡೆದಿದೆ. ಗಾಯಗೊಂಡ ಯುವತಿಯನ್ನು ರಕ್ಷಿತಾ (20ವ) ಎಂದು ಗುರುತಿಸಲಾಗಿದೆ. ಭಗ್ನ ಪ್ರೇಮಿಯ ಚೂರಿ…

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ “ಸೇವಾ ಪಾಕ್ಷಿಕ” ಸಾಮಾಜಿಕ ಸೇವಾ ಅಭಿಯಾನ

ಕಾರ್ಕಳ: ದೇಶದಲ್ಲಿ ಬಲಿಷ್ಠ ಹಾಗೂ ಜನಪರ, ಭ್ರಷ್ಟಾಚಾರ ರಹಿತ ಆಡಳಿತ ನೀಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸಿದ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿಯಿಂದ “ಸೇವಾ ಪಾಕ್ಷಿಕ” ಸಾಮಾಜಿಕ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ದೇಶಾದ್ಯಂತ “ಸೇವಾ…

ಕೆ. ಎಮ್. ಇ. ಎಸ್ ವಿದ್ಯಾಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಪಂದ್ಯಾಟ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ಒಗ್ಗೂಡಿಸುವ ಕ್ರೀಡೆ : ಪ್ರಭಾಕರ ಜೈನ್

ಕಾರ್ಕಳ: ಕೆ. ಎಮ್. ಇ. ಎಸ್ ವಿದ್ಯಾಸಂಸ್ಥೆ ರಾಷ್ಟ್ರಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಸಂಸ್ಥೆ. ಇಂಥಹ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವನ್ನು ಉದ್ಘಾಟನೆಗೊಳಿಸಲು ಹೆಮ್ಮೆಯಾಗುತ್ತದೆ. ವಿದ್ಯಾರ್ಥಿಗಳು ಆಟದಲ್ಲಿ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಪ್ರಭಾಕರ ಜೈನ್ ಹೇಳಿದರು. ಅವರು ಕೆ.…

ಭಾರತದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್’ ಪ್ರಮಾಣವಚನ ಸ್ವೀಕಾರ

ನವದೆಹಲಿ : ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮರ‍್ಮು ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಧಾಕೃಷ್ಣನ್ ಜಂಟಿ…

ತೆಂಗು ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮಾ ಯೋಜನೆ: ಕೇವಲ ರೂ.143 ವಾರ್ಷಿಕ ಪ್ರೀಮಿಯಂನಲ್ಲಿ 7 ಲಕ್ಷದವರೆಗೆ ವಿಮೆ ಪಡೆಯುವ ಅವಕಾಶ

ಕಾರ್ಕಳ: ತೆಂಗು ಅಭಿವೃದ್ಧಿ ಮಂಡಳಿಯು M/s ದಿನ್ಯೂಇಂಡಿಯಾ ಅನ್ಯುರೆನ್ಸ್ ಕಂ ಲಿ. ಸಹಯೋಗದೊಂದಿಗೆ ಜಾರಿಗೆ ತಂದಿರುವ ‘ಕೇರಾ ಸುರಕ್ಷಾ ವಿಮಾ ಯೋಜನೆ” ತೆಂಗಿನಮರಹತ್ತುವವರಿಗೆ/ನೀರಾತಂತ್ರಜ್ಞರಿಗೆ/ತೆಂಗುಕೊಯ್ಲು ಮಾಡುವವರಿಗೆ ಗರಿಷ್ಠ ಏಳು ಲಕ್ಷರೂಪಾಯಿಗಳವರೆಗೆ ಆಕಸ್ಮಿಕ ವಿಮಾ ರಕ್ಷಣೆಯನ್ನುಒದಗಿಸುತ್ತದೆ. ಪ್ರಸ್ತುತ ಫಲಾನುಭವಿಯ ವಾರ್ಷಿಕ ಪ್ರೀಮಿಯಂ ಪಾಲು ರೂ.…

ಬೆಳ್ಮಣ್: ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯ

ಕಾರ್ಕಳ:ತಾಲೂಕಿನ ಬೆಳ್ಮಣ್ ಗ್ರಾಮದ ನಂದಳಿಕೆಯಲ್ಲಿ ಬುಧವಾರ ರಾತ್ರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಪಾದಾಚಾರಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂದಳಿಕೆ ಗ್ರಾಮ ಪಂಚಾಯತ್ ಎದುರುಗಡೆ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೆಳ್ಮಣ್ ನಿಂದ ಕಾರ್ಕಳ…