Month: September 2025

ಸೆ.06 ರಂದು ಕಾರ್ಕಳ ಪುಲ್ಕೇರಿ ಬೈಪಾಸ್ ಜಂಕ್ಷನ್ ಬಳಿ ಹೋಟೆಲ್ ಕಾರ್ಕಳ ಇನ್ ಬಾರ್ & ರೆಸ್ಟೋರೆಂಟ್ ಶುಭಾರಂಭ

ಕಾರ್ಕಳ, ಸೆ02: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಿಂದ ಮಾನ್ಯತೆ ಪಡೆದ ಹೋಟೆಲ್ ಕಾರ್ಕಳ ಇನ್ ಬಾರ್ & ರೆಸ್ಟೋರೆಂಟ್ ಸೆ.06 ರಂದು ಉದ್ಘಾಟನೆಯಾಗಲಿದೆ. ಮಂಗಳೂರು -ಕುದುರೆಮುಖ ರಾಷ್ಟ್ರೀಯ ಹೆದ್ದಾರಿ ಹಾಗೂ ಪಡುಬಿದ್ರೆ-ಕಾರ್ಕಳ ರಾಜ್ಯ ಹೆದ್ದಾರಿ ಸಂಪರ್ಕಿಸುವ ಕಾರ್ಕಳದ ಪುಲ್ಕೇರಿ ಬೈಪಾಸ್ ಜಂಕ್ಷನ್…

ಭೋವಿ ನಿಗಮದಲ್ಲಿ ಭ್ರಷ್ಟಾಚಾರದ ಆರೋಪ : ಅಧ್ಯಕ್ಷ ರವಿಕುಮಾರ್ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು,ಸೆ.02 : ಭೋವಿ ಅಭಿವೃದ್ಧಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದ್ದು,ಈ ಕಾರಣದಿಂದ ನಿಗಮದ ಅಧ್ಯಕ್ಷ ರವಿಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿ ಸಿಎಂ ಕಚೇರಿಯಿಂದ ತಿಳಿದು ಬಂದಿದೆ. ಭೋವಿ…

ಧರ್ಮಸ್ಥಳ ಕೇಸ್‌ ಎನ್‌ಐಎಗೆ ವಹಿಸಿ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಹೊರದೇಶದಿಂದ ಹಣ ಪಡೆದು ಅಪಪ್ರಚಾರ ನಡೆಯುತ್ತಿದೆ. ದೇಶದ್ರೋಹಿಗಳು ಈ ಪ್ರಕರಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು.…

ಜಿಲ್ಲಾ ಮಟ್ಟದ ದಸರಾ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.01:ಉಡುಪಿ ಜಿಲ್ಲಾ ಮಟ್ಟದ ದಸರಾ ಪ್ರಯುಕ್ತ ನಡೆದ ಕುಸ್ತಿ ಸ್ಪರ್ಧೆಯಲ್ಲಿ 53ಕೆ.ಜಿ. ವಿಭಾಗದಲ್ಲಿ ಯಶಾ ಜಿ ಕೋಟ್ಯಾನ್ ಪ್ರಥಮ ಹಾಗೂ 55 ಕೆಜಿ ವಿಭಾಗದಲ್ಲಿ ರಿಶಾ ಜಿ. ಕೋಟ್ಯಾನ್ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳ ಎಸ್ ವಿ ಟಿ ಕಾಲೇಜಿನ ಕು.ಅನ್ವಿತಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ,ಸೆ.01: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಎಸ್‌.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು…

ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್’ಎಸ್ಐ ಶಂಕರ್ ಅವರಿಗೆ ರಾಷ್ಟ್ರಪತಿ ಪದಕ

ಉಡುಪಿ, ಸೆ.01: ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಎಆರ್’ಎಸ್ಐ ಶಂಕರ್ ಅವರಿಗೆ ರಾಷ್ಟ್ರಪತಿ ಪದಕ ಲಭಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಬೆಂಗಳೂರಿನಲ್ಲಿ ರಾಷ್ಟ್ರಪತಿ ಪದಕ ಗೌರವ ಪಡೆದುಕೊಂಡರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ…

ನನಗೆ ತಲೆಬುರುಡೆ ತಂದುಕೊಟ್ಟಿದ್ದೇ ಜಯಂತ್!: ಬುರುಡೆ ರಹಸ್ಯದ ಕುರಿತು ಎಸ್ಐಟಿ ಮುಂದೆ ಸ್ಪೋಟಕ ಮಾಹಿತಿ ನೀಡಿದ ಚಿನ್ನಯ್ಯ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬAಧಪಟ್ಟAತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ತನಗೆ ಬುರುಡೆ ಕೊಟ್ಟಿರುವುದು ಜಯಂತ್ ಎಂದು ಚಿನ್ನಯ್ಯ ಎಸ್‌ಐಟಿ ಅಧಿಕಾರಿಗಳ ಮುಂದೆ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ. ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಮೂಲ ಕೆದಕುತ್ತಿದ್ದು, ಈ ಒಂದು…

ಹೆಬ್ರಿ ಅಮೃತಭಾರತಿ ವಿದ್ಯಾಲಯದಲ್ಲಿ ಪ್ರತಿಭಾ ಪುರಸ್ಕಾರ

ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2024 – 25ನೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿಷಯವಾರು ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್…

ನಿಟ್ಟೆ ಕಾಲೇಜಿನಲ್ಲಿ ಬ್ರಾಂಚ್ ಅಸೋಸಿಯೇಷನ್ ಗಳು ಮತ್ತು ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: 2025-26ನೇ ಸಾಲಿನ ಬ್ರಾಂಚ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಿಟ್ಟೆಯ ಎನ್‌ಎಂಎಎಂಐಟಿಯ ಬಿ.ಸಿ.ಆಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ಶನಿವಾರ ನಡೆಯಿತು. ಈ ಕಾರ್ಯಕ್ರಮವನ್ನು ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾದ ಹಿರಿಯ ವ್ಯವಸ್ಥಾಪಕ ಮತ್ತು ಎನ್‌ಎಂಎಎಂಐಟಿಯ 2001-2005…

ಬಂಗಾಳಕೊಲ್ಲಿಯಲ್ಲಿ ವಾಯುಭಾರಕುಸಿತ: ಕರಾವಳಿಗೆ ಐದು ದಿನ ಭಾರೀ ಮಳೆ ಎಚ್ಚರಿಕೆ!

ಬೆಂಗಳೂರು (ಸೆ.1): ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1…