Month: October 2026

ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಕಾರ್ಕಳ ಬಿಜೆಪಿ ವತಿಯಿಂದ ಪ್ರತಿಭಟನೆ: ಜನವಿರೋಧಿ ಝೀರೋ ಬ್ಯಾಲೆನ್ಸ್ ಕಾಂಗ್ರೆಸ್ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ಸುನಿಲ್ ಕುಮಾರ್

ಕಾರ್ಕಳ, ಅ.04: ರಾಜ್ಯದ ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರವು ಭ್ರಷ್ಟಾಚಾರದಲ್ಲಿ ಮುಳುಗಿದೆ.ಜನರಿಗೆ ಗ್ಯಾರಂಟಿ ಭಾಗ್ಯ ನೀಡಿ ಬಳಿಕ ಅವುಗಳನ್ನು ಬಲವಂತವಾಗಿ ಕಿತ್ತುಕೊಂಡು ಜನರ ಬದುಕನ್ನು ಬೀದಿಗೆ ತಂದಿರುವ ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ಜನರು…

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ಕೇಂದ್ರ ಚುನಾವಣಾ ಆಯೋಗಕ್ಕೆ ನೋಟೀಸ್‌ ಜಾರಿ

ನವದೆಹಲಿ, ಅ.05: ಉಳಿದ ಇಬ್ಬರು ಚುನಾವಣಾ ಆಯುಕ್ತರ ಒಪ್ಪಿಗೆ ಪಡೆಯದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂಬ ಆರೋಪಕ್ಕೆ ಒಳಗಾಗಿದ್ದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮತ್ತು ಆರೋಪಗಳ ಕುರಿತು ವಿವರಣೆ ನೀಡುವಂತೆ…

ಕಾರ್ಕಳ: ಬೈಕ್ ಲಾರಿಗೆ ಡಿಕ್ಕಿಯಾಗಿ ಸವಾರ ಸಾವು

ಕಾರ್ಕಳ,ಅ.05: ಕಾರ್ಕಳ ತಾಲೂಕು ಸಾಣೂರು ಗ್ರಾಮದ ಪುಲ್ಕೇರಿ ಬಳಿ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಲಾರಿಗೆ ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಬೈಕ್ ಸವಾರ ವಿಘ್ನೇಶ್ ಆಚಾರ್ಯ (25ವ) ಮೃತಪಟ್ಟ ಯುವಕ. ವಿಘ್ನೇಶ್ ಇನ್ನೂ ನೊಂದಣಿಯಾಗದ…

ಜಿಪಿಟಿ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಕುಂದರ್ ಆಯ್ಕೆ

ಕಾರ್ಕಳ,ಅ.05: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ಜಿಪಿಟಿ) ತಾಲೂಕು ಘಟಕದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಬೈಲೂರು ಮೈನ್ ಶಾಲೆಯ ಶಿಕ್ಷಕರಾದ ಪ್ರಕಾಶ್ ಕುಂದರ್ ಅವರು ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇಮಾಭಿವೃದ್ಧಿಗಾಗಿ ಸದಾ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರಕಾಶ್ ಕುಂದರ್…

ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಬೀದರ್‌ನ ವಿಶಾಲ್ ಮೈತ್ರೆ ಸಹಿತ ಏಳು ಜನರ ವಿರುದ್ಧ FIR

ಬೀದರ್, ಅ. 05: ಉಗ್ರರ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಏಣಕೂರು ಗ್ರಾಮದ ವಿಶಾಲ್ ಮೇತ್ರೆ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಕಿಸ್ತಾನ ಮೂಲದ ಉಗ್ರರ ಜಾಲದ ಜೊತೆ ವಿಶಾಲ್ ಮೇತ್ರೆ ನಂಟು…

ನಕಲಿ ಓಟ್ ಹಾಕಿಸುತ್ತಿದ್ದ ಕಾಂಗ್ರೆಸ್‌ನವರಿಗೆ SIR ನಿಂದ ತೊಂದರೆಯಾಗಿದೆ: ಸಂಸದ ಬಸವರಾಜ ಬೊಮ್ಮಾಯಿ ಆರೋಪ

ಬೆಂಗಳೂರು, ಅ.04: ಪ್ರತೀ ಸಲದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದವರು ನಕಲಿ ಮತಗಳನ್ನು ಹಾಕಿಸಿಕೊಂಡು ಅಧಿಕಾರಕ್ಕೆ ಬರುತ್ತಿದ್ದರು. ಒಂದೇ ವ್ಯಕ್ತಿಯಿಂದ ಎರಡು ಕಡೆ ಮತಗಳನ್ನು ಹಾಕಿಸುವುದು ಅಥವಾ ಸತ್ತವರ ಹೆಸರಿನಲ್ಲಿ ಮತಗಳನ್ನು ಹಾಕಿಸುತ್ತಿದ್ದರು,ಆದರೆ ಈಗ ಎಸ್‌ಐಆರ್ ನಿಂದ ಅವರಿಗೆ ತೊಂದರೆಯಾಗಿದೆ. ಹೀಗಾಗಿ ಸಿಎಂ…

ಮಣಿಪಾಲ: ಐವರಿಗೆ ಜಿಲ್ಲಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ

ಮಣಿಪಾಲ,ಅ.04: ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ಕುಪ್ಮಾ (ರಿ.) ಉಡುಪಿ ಜಿಲ್ಲಾ ಸಮಿತಿ, ಕುಪ್ಮಾ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಸಮಾರಂಭ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು…

ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಗಣಿತ ವಿಜ್ಞಾನ ಮೇಳ: ಹೆಬ್ರಿ ಅಮೃತಭಾರತಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ, ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೆಬ್ರಿ,ಅ.04: ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ 2026-27ನೇ ಸಾಲಿನ ಕ್ಷೇತ್ರ ಮಟ್ಟದ ಗಣಿತ ವಿಜ್ಞಾನ ಮೇಳ ಮತ್ತು ಸಂಸ್ಕೃತಿ ಜ್ಞಾನ ಪರಿಚಯ ಸ್ಪರ್ಧೆಯಲ್ಲಿ ಅಮೃತ ಭಾರತಿ ವಿದ್ಯಾಕೇಂದ್ರ (CBSE), ಹೆಬ್ರಿಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜಯವಾಡದಲ್ಲಿ ಇತ್ತೀಚೆಗೆ…

ಶಿವಪುರ: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾತನ ಬಂಧನ, 11 ಸಾವಿರ ಮೌಲ್ಯದ ಮದ್ಯ ವಶ

ಹೆಬ್ರಿ, ಅ.04:ಹೆಬ್ರಿ ತಾಲೂಕಿನ ಶಿವಪುರ ಗ್ರಾಮದ ಖಜಾನೆ ಶ್ರೀ ಸಾಯಿ ಅಂಗಡಿಯ ಎದುರು ರಸ್ತೆ ಪಕ್ಕದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಪಡೆದ ಹೆಬ್ರಿ ಠಾಣೆಯ ಪಿಎಸ್‌ಐ ಲೋಹಿತ್ ಕುಮಾರ್ ಸಿ ಎಸ್ ನೇತೃತ್ವದ ಪೊಲೀಸರ…

ಶುಭ ಸಮಾರಂಭಗಳಿಗೆ ಏಕೈಕ ಆಯ್ಕೆ ಕಾರ್ಕಳದ ಪುಲ್ಕೇರಿಯ ರಾವ್ ಗಾರ್ಡನ್ ಹೊರಾಂಗಣ ಸಭಾಭವನ: 700 ಆಸನಗಳ ಸಾಮರ್ಥ್ಯವುಳ್ಳ ವಿಶಾಲ ಸಭಾಂಗಣ, ಅತ್ಯುತ್ತಮ ಕ್ಯಾಟರಿಂಗ್ ಹಾಗೂ ಪಾರ್ಕಿಂಗ್ ವ್ಯವಸ್ಥೆ

ಕಾರ್ಕಳ, ಅ.04: ತಾಲೂಕಿನ ಪುಲ್ಕೇರಿ ಬೈಪಾಸ್ ವೃತ್ತದ ಸಮೀಪದ ಹೋಟೆಲ್ ‘ಕಾರ್ಕಳ ಇನ್’ ಗೆ ಹೊಂದಿಕೊAಡAತೆ ‘ರಾವ್ ಗಾರ್ಡನ್’ ಎಂಬ ಸುಸಜ್ಜಿತ ಹೊರಾಂಗಣ ಸಭಾಭವನ ವಿವಿಧ ಶುಭ ಸಮಾರಂಭಗಳು ಹಾಗೂ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧವಾಗಿದೆ. ಕಾರ್ಕಳದ ಹೃದಯ ಭಾಗದಲ್ಲಿರುವ ಈ ಸಭಾಂಗಣ…