Year: 2026

ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಉಡುಪಿ, ಸೆ.04:ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಚಂದ್ರ ನಾಯ್ಕ್‌ ಎಚ್, ಮಣಿಪಾಲ…

ಹೆಬ್ರಿ: ಸಾಂತೊಳ್ಳಿ-ಮಣಿಗುಂಡಿ ಸಂಪರ್ಕ ರಸ್ತೆ, ಸೇತುವೆ ಸೇರಿ ಮೂಲಸೌಕರ್ಯ ಒದಗಿಸಲು ಗ್ರಾಮಸ್ಥರಿಂದ ತಹಶೀಲ್ದಾರ್’ಗೆ ಮನವಿ

ಹೆಬ್ರಿ,ಸೆ.04: ವಿವಿಧ ಮೂಲಸೌಕರ್ಯಗಳಿಗೆ ಆಗ್ರಹಿಸಿ ಹೆಬ್ರಿ ಗ್ರಾಮದ ಸಾಂತೊಳ್ಳಿ ಮಣಿಗುಂಡಿ, ಜಡ್ಡು ಗ್ರಾಮಗಳ ಜನರು ಹೆಬ್ರಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಸಾಂತೊಳ್ಳಿ ಮಣಿಗುಂಡಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು,ಕಲ್ಲು ಹೊಂಡ ಕೆಸರಿನಿಂದ ಕೂಡಿದ್ದು, ವಾಹನಗಳ ಓಡಾಟಕ್ಕೆ ತೊಂದರೆಯಾಗುತ್ತಿದೆ ಮಾತ್ರವಲ್ಲದೇ ನಡೆದುಕೊಂಡು…

ಹೆಬ್ರಿ: ಪ್ರತ್ಯೇಕ ಅಪಘಾತ: ಚಾಲಕ ಹಾಗೂ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಹೆಬ್ರಿ, ಸೆ. 04: ಆಗುಂಬೆಯಿಂದ ಹೆಬ್ರಿ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ವಾಹನ ಸೋಮೇಶ್ವರ ಸಮೀಪ ವೇಗವಾಗಿ ಸಂಚರಿಸುವ ವೇಳೆ ರಸ್ತೆ ಬದಿಯ ಕಂದಕಕ್ಕೆ ಉರುಳಿ ಅಪಘಾತ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಘಟನೆ ನಡೆದಿದ್ದು,ಶಿವಮೊಗ್ಗದಿಂದ ಕಾರ್ಕಳ ಕಡೆಗೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ…

RSS ಪಥಸಂಚಲನದಲ್ಲಿ ಪಾಲ್ಗೊಂಡಿದ್ದ ಶಿಕ್ಷಕರ ಅಮಾನತು ಆದೇಶಕ್ಕೆ ತಡೆ ನೀಡಿದ  KSAT : ರಾಜ್ಯ ಸರ್ಕಾರಕ್ಕೆ ಮುಖಭಂಗ

ಕಲಬುರಗಿ, ಸೆ.04:RSS ಪಥಸಂಚಲನದಲ್ಲಿ ಭಾಗವಹಿಸಿರುವ ಆರೋಪದದಲ್ಲಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಿಕ್ಷಕರನ್ನು ಅಮಾನತುಗೊಳಿಸಿದ ಸರ್ಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ(KSAT) ತಡೆ ನೀಡಿದೆ. ಶಿಕ್ಷಕರಾದ ಗುರುರಾಜ್ ಜೋಶಿ ಮತ್ತು ಅಣ್ಣಾಸಾಹೇಬ್ ದೇಶಮುಖ್ ಅವರು ಕಳೆದ 2025ರ ಅಕ್ಟೋಬರ್ 12ರಂದು…

ಕಾರ್ಕಳ: ಅಪಘಾತದಲ್ಲಿ ಗಾಯಗೊಂಡು ಮನೆಯಲ್ಲಿ ಹಾಸಿಗೆ ಹಿಡಿದಿದ್ದ ಮಹಿಳೆ ಸಾವು

ಕಾರ್ಕಳ, ಸೆ 03: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೆನ್ನುಮೂಳೆ ಮುರಿತವಾಗಿ ಬಳಿಕ ಕೋಮಾಗೆ ತಲುಪಿ ಹಾಸಿಗೆ ಹಿಡಿದಿದ್ದ ಕಾರ್ಕಳ ತಾಲೂಕಿನ ಅತ್ತೂರು ಗ್ರಾಮದ ಮಹಿಳೆ ಐಶ್ವರ್ಯ (28) ಎಂಬವರು ಮೃತಪಟ್ಟಿದ್ದಾರೆ. ಮೃತ ಐಶ್ವರ್ಯ ಅವರು ಕಳೆದ 2025ರ ನವೆಂಬರ್ 13ರಂದು ತನ್ನ…

ತಾಕತ್ತಿದ್ದರೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿ: ಕಾಂಗ್ರೆಸ್ ಸ್ಟಿಕ್ಕರ್ ಅಭಿಯಾನಕ್ಕೆ ಬಿಜೆಪಿ ಮುಖಂಡ ನವೀನ್ ನಾಯಕ್ ತಿರುಗೇಟು

ಕಾರ್ಕಳ,ಸೆ. 03: ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವ ವಿ ಸುನಿಲ್ ಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿರುವ ಕಾರ್ಕಳ ಕಾಂಗ್ರೆಸ್ಸಿಗರೇ ನಿಮಗೆ ಸ್ವಲ್ಪ ಅದರೂ ರಾಜಕೀಯ ನೈತಿಕತೆ ಇದೆಯೇ ಎನ್ನುವುದನ್ನು ಆತ್ಮವಿಮರ್ಶೆ ಮಾಡಿಕೊಳ್ಳಿ. ನಿಮ್ಮ ಪಕ್ಷದ ರಾಜ್ಯ ಸರ್ಕಾರವೇ ಭ್ರಷ್ಟಾಚಾರದಲ್ಲಿ…

ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಅಭಿವೃದ್ಧಿ ಕುರಿತು ಐತಿಹಾಸಿಕ ನಿರ್ಧಾರವಾಗಲಿ: ಸಾಣೂರು ನರಸಿಂಹ ಕಾಮತ್

ಕಾರ್ಕಳ, ಸೆ. 03:ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯು ಮಂಗಳೂರಿನಲ್ಲಿ ನಡೆಯುತ್ತಿರುವುದು ಸ್ವಾಗತಾರ್ಹ. ಅಡಿಕೆ ,ತೆಂಗು, ಗೇರು, ಕಾಳು ಮೆಣಸು ಇನ್ನಿತರ ತೋಟಗಾರಿಕಾ ಬೆಳೆಗಳು, ಭತ್ತದ ಕೃಷಿಕರ ಸಮಸ್ಯೆ ನಿವಾರಣೆ, ಗೇರು ಬೀಜ ಸಂಸ್ಕರಣಾ ಘಟಕಗಳು ಎದುರಿಸುತ್ತಿರುವ ಸಮಸ್ಯೆ ಮತ್ತು ಇನ್ನಿತರ…

ಬಿಪಿಎಲ್ ಮಾನದಂಡ ಪರಿಷ್ಕರಣೆಗೆ ಸರ್ಕಾರ ಚಿಂತನೆ: ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿಕೆ

ಮೈಸೂರು,ಸೆ.03: ಬಿಪಿಎಲ್ ಪಡಿತರ ಚೀಟಿ ಪಡೆಯಲು ನಿಗದಿಗೊಳಿಸಿರುವ ಮಾನದಂಡಗಳ ಪರಿಷ್ಕರಣೆಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಹೇಳಿದರು. ಅವರು ಮೈಸೂರು ಭೇಟಿ ವೇಳೆ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಮಾಧ್ಯಮ…

ನಿಟ್ಟೆ ಪರಪ್ಪಾಡಿ ಬಳಿ ಭೀಕರ ಅಪಘಾತ: ಕ್ಯಾಂಟರ್- ಕಾರು ಮುಖಾಮುಖಿ ಡಿಕ್ಕಿ: ಚಾಲಕರು ಪ್ರಾಣಾಪಾಯದಿಂದ ಪಾರು

ಕಾರ್ಕಳ,ಸೆ.02: ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿ ಬಳಿ ಕಾರು ಹಾಗೂ ಕ್ಯಾಂಟರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು,ಕ್ಯಾಂಟರ್ ಪಲ್ಟಿಯಾಗಿದೆ. ಮೈಸೂರಿನಿಂದ ಉಡುಪಿಗೆ ಕಲ್ಲಂಗಡಿ ಹಣ್ಣು ಸಾಗಿಸುತ್ತಿದ್ದ ಕ್ಯಾಂಟರ್…

ಸ್ಟಿಕ್ಕರ್ ಅಂಟಿಸುವ ಮುನ್ನವೇ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು: ಕಾಂಗ್ರೆಸ್’ನ ಸ್ಟಿಕ್ಕರ್ ಅಭಿಯಾನ ವಿಫಲ

ಕಾರ್ಕಳ, ಸೆ.02: ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಮತ್ತೊಂದು ಸುತ್ತಿನ ಜಟಾಪಟಿ ಆರಂಭವಾಗಿದೆ. ಶಾಸಕ ಸುನಿಲ್ ಕುಮಾರ್ ಮನೆಗೆ ಸ್ಟಿಕ್ಕರ್ ಅಂಟಿಸಲು ಮುಂದಾದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಅರ್ಧದಲ್ಲೇ ತಡೆದು ವಶಕ್ಕೆ ಪಡೆದ ಘಟನೆ ಬುಧವಾರ…