Year: 2026

ಬೆಂಗಳೂರಿನಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ನಕಲಿ ಔಷಧಿ ಸೀಜ್

ಬೆಂಗಳೂರು,ಆ.19:ಇತ್ತೀಚಿನ ದಿನಗಳಲ್ಲಿ ಯಾವುದೇ ಉತ್ಪನ್ನ ಮಾರುಕಟ್ಟೆಗೆ ಬಂದರೂ ಅದಕ್ಕೆ ಪ್ರತಿಯಾಗಿ ಅದೇ ಬ್ರಾಂಡಿನ ನಕಲಿ ಉತ್ಪನ್ನಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ಜನರಿಗೆ ನಕಲಿ ಯಾವುದು ಅಸಲಿ ಯಾವುದು ಎನ್ನುವುದು ಗೊತ್ತಾಗದಂತೆ ನಕಲಿ ಉತ್ಪನ್ನಗಳನ್ನು ಸಿದ್ಧಪಡಿಸಲಾಗುತ್ತದೆ. ನಾವು ದೈನಂದಿನ ಜೀವನದಲ್ಲಿ ಬಳಸುವ ವಸ್ತಗಳು…

ಬೀದಿಬದಿ ವ್ಯಾಪಾರಿಗಳಿಂದ ಅಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಆರೋಪ: ಆನ್’ಲೈನ್ ಬುಕ್ಕಿಂಗ್, ಕಾರಿನಲ್ಲೇ ಹೈಟೆಕ್ ಬೀದಿಬದಿ ವ್ಯಾಪಾರ: ಜನರ ಆರೋಗ್ಯ ಕೆಟ್ಟರೆ ಹೊಣೆ ಯಾರು?

ಕಾರ್ಕಳ,ಆ.18:ಇತ್ತೀಚಿನ ದಿನಗಳಲ್ಲಿ ಬೀದಿ ಬದಿಯ ವ್ಯಾಪಾರ ಉದ್ಯಮ ಗಣನೀಯವಾಗಿ ಬೆಳೆಯುತ್ತಿದ್ದು,ಇದರ ಸಾಲಿಗೆ ಸೋಶಿಯಲ್ ಮೀಡಿಯಾ ಮೂಲಕ ಗಲ್ಲಿಗಲ್ಲಿಗಳಲ್ಲಿ ಹೈಟೆಕ್ ಬೀದಿಬದಿ ವ್ಯಾಪಾರಿಗಳು ಹುಟ್ಟಿಕೊಂಡಿದ್ದಾರೆ. ಬೀದಿಬದಿಯ ಜಂಕ್ ಫುಡ್ ಗಳಿಗೆ ಯುವಕರು,ಮಕ್ಕಳು,ಹಿರಿಯರು ಕೂಡ ಮಾರುಹೋಗುತ್ತಾರೆ. ಆದರೆ ಬಹುತೇಕ ಬೀದಿ ಬದಿಯಲ್ಲಿ ವ್ಯಾಪಾರ ಮಾಡುವವರು…

ಯಾವುದೇ ಕೈದಿಗಳಿಗೂ ಜೈಲುಗಳಲ್ಲಿ ವಿಐಪಿ ಸೌಲಭ್ಯ ನೀಡಲಾಗುತ್ತಿಲ್ಲ: ಸದನದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು, ಆ.18: ರಾಜ್ಯದ ಕಾರಾಗೃಹಗಳಲ್ಲಿ ಮೊಬೈಲ್ ಬಳಕೆ ಮತ್ತು ವಿಐಪಿ ಸೌಲಭ್ಯಗಳ ಕುರಿತ ಆರೋಪಗಳಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಶಾಸಕ ಎಸ್.ಟಿ. ಸೋಮಶೇಖರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ…

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆ: ತಮಿಳುನಾಡಿಗೆ ನೀರು ಹರಿಸಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ, ಆಗಸ್ಟ್ 17: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಸುಪ್ರೀಂ ಕೋರ್ಟಿನಲ್ಲಿ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನು ಪಾಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಸೂಚಿಸಿದೆ. ನಿತ್ಯ 12 ಸಾವಿರ…

ಬೈಲೂರು: ಉನ್ನತಿ ಸಂಸ್ಥೆಯ 5ನೇ ವರ್ಷಾಚರಣೆ: ಸಾಧಕರಿಗೆ ಸನ್ಮಾನ ಕಾರ್ಯಕ್ರಮ: ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ,ಆ.17: ಉನ್ನತಿ ಚಾರಿಟಬಲ್ ಟ್ರಸ್ಟ್ ಇದರ 5ನೇ ವರ್ಷದ ಸಂಭ್ರಮಾಚರಣೆ, 80ನೇ ವರ್ಷದ ಸ್ವಾತಂತ್ರö್ಯ ದಿಚಾರಣೆ ಹಾಗೂ ವಿವಿಧ ಕ್ಷೇತ್ರಗಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಬೈಲೂರು ಮೈನ್ ಸರಕಾರಿ ಶಾಲೆಯಲ್ಲಿ ಜರುಗಿತು. ಎಸ್‌ಡಿಎಂಸಿ ಅಧ್ಯಕ್ಷರಾದ ಸಚ್ಚಿದಾನಂದ ಶೆಟ್ಟಿ ಧ್ವಜಾರೋಹಣ ನೇರವೇರಿಸಿ…

ಮಾಳ ಗುರುಕುಲ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ,ಆ.16: ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ‍್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ ಇವರು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಶಾಲಾ ಪೂರ್ವ ವಿದ್ಯಾರ್ಥಿ ಸೂಕ್ಷ್ಮ, ಸಣ್ಣ…

ಅಜೆಕಾರು ಜ್ಞಾನಸುಧಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೇಶಸುಧಾ’ ಮೂರನೇ ಮಾಲಿಕೆ

ಕಾರ್ಕಳ,ಆ.16: ಅಜೆಕಾರು ಜ್ಞಾನಸುಧಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು, ಪದ್ಮನಗರದಲ್ಲಿ ಅಜೆಕಾರು ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ್ ಶೆಟ್ಟಿ ಅವರ “ದೇಶಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು” ಎಂಬ ದೇಶಭಕ್ತಿಯ ಚಿಂತನೆಯೊAದಿಗೆ ರೂಪುಗೊಂಡಿರುವ ‘ದೇಶಸುಧಾ’ ಕಾರ್ಯಕ್ರಮದ ಮೂರನೇ ಮಾಲಿಕೆ ಸ್ವಾತಂತ್ರ‍್ಯೋತ್ಸವದAದು…

ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳ ಶುದ್ಧೀಕರಣಗೊಳಿಸಿದ ನಡೆ ಖಂಡನೀಯ: ದಲಿತ ಮುಖಂಡ ಸುಧಾಕರ್ ದಾನಶಾಲೆ

ಕಾರ್ಕಳ,ಆ.16: ಉತ್ತರಾಖಂಡದ ಹಲ್ದ್ವಾನಿ ರಾಮಲೀಲಾ ಮೈದಾನದಲ್ಲಿ ಆಗಸ್ಟ್ 8 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳವನ್ನು ಶುದ್ಧೀಕರಣ ಮಾಡುವ ಮೂಲಕ ಸ್ವಚ್ಛಗೊಳಿಸಲಾಗಿದೆ ಎಂಬ ವಿಚಾರ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ರಾಷ್ಟ್ರಮಟ್ಟದ ದಲಿತ…

ಕೋಲಾರ: ಸ್ವಾತಂತ್ರ್ಯ ದಿನಾಚರಣೆ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ; ಮೊಹಮ್ಮದ್ ಪೀರ್ ಎಂಬಾತನ ಬಂಧನ

ಕೋಲಾರ,ಆ.16: ನಗರದ ಮಹಾಲಕ್ಷ್ಮೀ ಬಡಾವಣೆಯಲ್ಲಿ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣದ ವೇಳೆ ಖಡ್ಗ ಪ್ರದರ್ಶಿಸಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದಡಿ ಮಹಾಲಕ್ಷ್ಮೀ ಬಡಾವಣೆ ನಿವಾಸಿ ಮೊಹಮ್ಮದ್ ಪೀರ್ ಅಲಿಯಾಸ್ ಜಾವಾ ಎಂಬಾತನನ್ನು ಕೋಲಾರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಧ್ವಜಾರೋಹಣದ ಸಂದರ್ಭದಲ್ಲಿ ಮುಸ್ತಫಾ…

ಅಜೆಕಾರು ಜ್ಯೋತಿ ಮಹಿಳಾ ಮಂಡಳಿ  ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಳೆ ಪದ್ಧತಿಯ ತಿಂಡಿ ತಿನಿಸುಗಳ ಸ್ಪರ್ಧೆ

ಕಾರ್ಕಳ ಆ.15: ಅಜೆಕಾರು ಜ್ಯೋತಿ ಮಹಿಳಾ ಮಂಡಳಿ ವತಿಯಿಂದ ಜ್ಯೋತಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಹಳೆ ಪದ್ಧತಿಯ ತಿಂಡಿ ತಿನಿಸುಗಳ ಸ್ಪರ್ಧೆ ನೆರವೇರಿತು. ಪ್ರೌಢಶಾಲಾ ಮುಖ್ಯ ಶಿಕ್ಸಕಿ ಸಿಸ್ಟರ್ ಲೀಝ ಕಾರ್ಯಕ್ರಮ ಉದ್ಘಾಟಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಶಿಕ್ಷಕಿಯರಾದ…