Share this news

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಆತಂಕ ಸೃಷ್ಟಿಸಿದ ಘಟನೆ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

 

ಸುಳ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವ ಅಪಾಯವು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಈತನ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು ಮಾತ್ರವಲ್ಲದೇ ಸ್ಥಳೀಯರು ಅಧಿಕಾರಿಯ ವಿರುದ್ಧ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ

Leave a Reply

Your email address will not be published. Required fields are marked *