Share this news

ಬೆಂಗಳೂರು: ರಾಜ್ಯದಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಹೊಸ ವರ್ಷದ ಆರಂಭದಲ್ಲೇ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 4 ರಿಂದ 7 ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ 3 ರಿಂದ 4 ದಿನ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *