ಹೆಬ್ರಿ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ವಿದ್ಯಾಭಾರತಿ ಸಂಬಂಧಿತ ರಾಜ್ಯ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಅಶ್ವಿನ್ ದ್ವಿತೀಯ ಸ್ಥಾನ, 10ನೇ ತರಗತಿಯ ವಿದ್ಯಾರ್ಥಿನಿ ಶಾನ್ವಿ ತೃತೀಯ ಸ್ಥಾನ ಪಡೆದಿದ್ದಾರೆ.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ ಇವರನ್ನು ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಹಾಗೂ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿ ಅಭಿನಂದಿಸಿದ್ದಾರೆ.