ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದಿನಿAದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ನಾಳೆ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ನಾಳೆ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರಜೆ ಘೋಷಿಸಿ ಆದೇಶ ಹೊರಡಿಸದೆ. ಶನಿವಾರ ಪೂರ್ಣ ದಿನ ತರಗತಿ ನಡೆಸಿ ಸರಿಪಡಿಸಿಕೊಳ್ಳುವಂತೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಎಸ್ ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಎಸ್ ಎಂ ಕೃಷ್ಣಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.