ಕಾರ್ಕಳ: ಅಮೃತ್ 2.0 ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಕಾರ್ಕಳ ಪುರಸಭಾ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜಾಗುವ ಮುಂಡ್ಲಿ ರೇಚಕ(ನೀರು ಸರಬರಾಜು) ಸ್ಥಾವರದ ನವೀಕರಣ ಕಾಮಗಾರಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಕೈಗೆತ್ತಿಕೊಳ್ಳಲಾಗಿರುವುದರಿಂದ ಪುರಸಭಾ ವ್ಯಾಪ್ತಿಯಲ್ಲಿ ಸರಬರಾಜಾಗುವ ಕುಡಿಯುವ ನೀರಿನ ಸರಬರಾಜಿನಲ್ಲಿ 30 ದಿನಗಳು ವ್ಯತ್ಯಯವಾಗಲಿದೆ. ನೀರು ಸರಬರಾಜು ಹಾಗೂ ಸಮಯದಲ್ಲಿ ಹಾಗೂ ಸರಬರಾಜು ಪ್ರಮಾಣದಲ್ಲಿ ವ್ಯತ್ಯಯವಾಗಲಿದೆ ಎಂದು ಪುರಸಭೆ ಪ್ರಕಟಣೆ ತಿಳಿಸಿದೆ.