ನವದೆಹಲಿ: ಕಳೆದ ಕೆಲ ದಿನಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಇದೀಗ ಅಂತ್ಯಗೊAಡಿದೆ. ತೆಲಂಗಾಣ, ಪಂಜಾಬ್ ಸೇರಿದಂತೆ 4 ರಾಜ್ಯಗಳಿಗೆ ನೂತನ ರಾಜ್ಯಾಧ್ಯಕ್ಷರನ್ನು ಘೋಷಣೆ ಮಾಡಲಾಗಿದೆ. ಆದರೆ ಕರ್ನಾಟಕದಲ್ಲಿ ಪ್ರತಿಪಕ್ಷ ನಾಯಕನ ಆಯ್ಕೆ ಬಳಿಕ ರಾಜ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ.
ಬಿಜೆಪಿಯ ತೆಲಂಗಾಣ ನೂತನ ರಾಜ್ಯಾಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರ ಪ್ರದೇಶಕ್ಕೆ ಪುರಂದೇಶ್ವರಿ ಆಯ್ಕೆಯಾಗಿದ್ದರೆ ಪಂಜಾಬ್‌ನಲ್ಲಿ ಬಿಜೆಪಿ ಸಾರಥ್ಯ ಸುನಿಲ್ ಜಖಾರ್ ಹೆಗಲೇರಿದೆ. ಇನ್ನು ಜಾರ್ಖಂಡ್‌ನಲ್ಲಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ನೂತನ ಬಿಜೆಪಿ ರಾಜ್ಯಾಧ್ಕ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕದ ಹಾಲಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವಧಿ ಅಂತ್ಯಗೊAಡಿದೆ. ಇದೀಗ ನೂತನ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತು ನಡೆಯುತ್ತಿದೆ. ಇತ್ತ ಕೆಲ ನಾಯಕರ ನಡುವೆ ಪೈಪೋಟಿ ನಡೆಯುತ್ತಿದೆ. ರೇಸ್‌ನಲ್ಲಿ ಅಶ್ವತ್ಥ್ ನಾರಾಯಣ್, ಶೋಭ ಕರಂದ್ಲಾಜೆ, ಅರಗ ಜ್ಞಾನೇಂದ್ರ ಸೇರಿದಂತೆ ಕೆಲ ಹೆಸರುಗಳು ಕೇಳಿಬರುತ್ತಿದೆ. ಇದರಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವರಾಗಿರುವ ಶೋಭಾ ಕರಂದ್ಲಾಜೆ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎನ್ನಲಾಗಿದೆ.