
ಹೆಬ್ರಿ,ನ.28: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ (ರಿ.), ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸುಂದರ ಪುರಾಣಿಕ್ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನೈತಿಕ ಮತ್ತು ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಕೆಪಿಎಸ್ ಮುನಿಯಾಲಿನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಪ್ರೌಢಶಾಲಾ ವಿಭಾಗದ 10ನೇ ತರಗತಿಯ ವಿದ್ಯಾರ್ಥಿ ವಂಶಿತ್ ಆಚಾರ್ಯ ಚಿತ್ರಕಲೆಯಲ್ಲಿ ಪ್ರಥಮ, ಎಂಟನೇ ತರಗತಿಯ ಸಾತ್ವಿ ಶೆಟ್ಟಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ಪ್ರಾಥಮಿಕ ಶಾಲಾ ವಿಭಾಗದ ಏಳನೇ ತರಗತಿಯ ಸ್ತುತಿ ಆಚಾರ್ಯ ಚಿತ್ರಕಲೆಯಲ್ಲಿ ಪ್ರಥಮ , ಸನ್ನಿಧಿ ಎಸ್ ನಾಯಕ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಸAಸ್ಥೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ನೇಹಾ ಶ್ಲೋಕ ಕಂಠ ಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಸಾರ್ವಿ ಆರ್ ಪೂಜಾರಿ ಮತ್ತು ಆರಾಧ್ಯ ರಾಜೀವ ಪೂಜಾರಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಂಸಾ ಪತ್ರವನ್ನು ಪಡೆದಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಪ್ರಾಂಶುಪಾಲರು ಉಪ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿರುತ್ತಾರೆ.






.
.
.
.
.
.
.
.
.
.
.
.
.
.
.
.
.
.
.
.
