
ನವದೆಹಲಿ,ಜು.25: ನೀಟ್ ಸೇರಿದಂತೆ ವಿವಿಧ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರದ 47 ಅಧಿಕಾರಿಗಳನ್ನು ಸರ್ಕಾರಿ ಸೇವೆಯಿಂದಲೇ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದೆ. ದೇಶದಾದ್ಯಂತ ವಿದ್ಯಾರ್ಥಿಗಳು ಮತ್ತು ಯುವಜನತೆ ನಡೆಸುತ್ತಿರುವ ತೀವ್ರ ಪ್ರತಿಭಟನೆಯ ನಡುವೆ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರುಸ್ಥಾಪಿಸಲು ಕೇಂದ್ರ ಸರ್ಕಾರ ಈ ಕಠಿಣ ನಿರ್ಧಾರ ಕೈಗೊಂಡಿದೆ.
ವಜಾಗೊAಡಿರುವ ಅಧಿಕಾರಿಗಳ ವಿರುದ್ಧ ಆಂತರಿಕ ತನಿಖೆ ಹಾಗೂ ತನಿಖಾ ಸಂಸ್ಥೆಗಳ ವರದಿ ಆಧಾರದ ಮೇಲೆ ಕಾನೂನು ಮತ್ತು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲು ನಿರ್ಧರಿಸಲಾಗಿದೆ.ಇದರ ಜೊತೆಗೆ NTA ಕಾರ್ಯವೈಖರಿಯನ್ನು ಸುಧಾರಿಸಲು ಹೊರಗುತ್ತಿಗೆ ಆಧಾರಿತ ಸಿಬ್ಬಂದಿ ಅವಲಂಬನೆಯನ್ನು ಕಡಿಮೆ ಮಾಡಿ, ಸೈಬರ್ ಭದ್ರತೆ, ವಿಧಿವಿಜ್ಞಾನ ಹಾಗೂ ಪರೀಕ್ಷಾ ಕೇಂದ್ರಗಳ ನಿರ್ವಹಣೆಗಾಗಿ ಕಾಯಂ ಪರಿಣಿತ ಅಧಿಕಾರಿಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗುವವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 1 ಕೋಟಿವರೆಗೆ ದಂಡ ವಿಧಿಸುವ ‘ಸಾರ್ವಜನಿಕ ಪರೀಕ್ಷಾ (ಅಕ್ರಮ ಮಾರ್ಗಗಳ ತಡೆ) ಕಾಯ್ದೆ-2024’ಕ್ಕೆ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ವಿಶೇಷ ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನು ಸ್ಥಾಪಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ. ಶಿಕ್ಷಣ ಸಚಿವಾಲಯದಲ್ಲೂ ಪ್ರಮುಖ ಆಡಳಿತಾತ್ಮಕ ವರ್ಗಾವಣೆಗಳನ್ನು ಕೈಗೊಳ್ಳಲಾಗಿದ್ದು, ಉನ್ನತ ಶಿಕ್ಷಣ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಿಸಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
