ಬೆಂಗಳೂರು : 595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ.
ವಿಧಾನಸೌಧದಲ್ಲಿ ಇಂದು ಪರಿಶಿಷ್ಟ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಜಾಗೃತಿ ಕಾರ್ಯಕ್ರಮದಲ್ಲಿ 595 ಕೋಟಿ ರೂ. ಮೊತ್ತದ ಗಂಗಾ ಕಲ್ಯಾಣ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಯೋಜನೆ ಮೂಲಕ 17 ಸಾವಿರ ಫಲಾನುಭವಿಗಳಿಗೆ ಸೌಲಭ್ಯ ಸಿಗಲಿದೆ. ಸಾಂಕೇತಿಕವಾಗಿ ಇಬ್ಬರಿಗೆ ಯೋಜನೆ ಸೌಲಭ್ಯ ವಿತರಣೆ ಮಾಡಿದ್ದಾರೆ.
ಪೌರಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ಯೋಜನೆಗೂ ಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಯೋಜನೆಯಡಿ 300 ಪೌರಕಾರ್ಮಿಕರು ಸಿಂಗಾಪುರ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಸಾಂಕೇತಿಕವಾಗಿ ಇಬ್ಬರು ಪೌರಕಾರ್ಮಿಕರಿಗೆ ಪಾಸ್ ಪೋರ್ಟ್ ವಿತರಿಸಿದ್ದಾರೆ.