Share this news

ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ಮಾವೋವಾದಿ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ.  ಕಳೆದ ಹಲವು ವರ್ಷಗಳಿಂದ ಕಾಡಿನೊಳಗೆ ಅಡಗಿ ಕುಳಿತು ಸದಾ ಸಂಘರ್ಷ, ರಕ್ತಚರಿತ್ರೆ ಬರೆಯುತ್ತಿದ್ದ ನಕ್ಸಲರು ಇದೀಗ ಮುಖ್ಯವಾಹಿನಿಗೆ ಬಂದಿದ್ದಾರೆ. ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಸಮಿತಿ ಸದಸ್ಯರು ಹಾಗೂ ಶಾಂತಿಗಾಗಿ ನಾಗರೀಕರ ವೇದಿಕೆ ಸದಸ್ಯರ ಸಮ್ಮುಖದಲ್ಲಿ 6 ಮಂದಿ ನಕ್ಸಲರು ಶರಣಾದರು.ಇನ್ನು ಶರಣಾದ ನಕ್ಸಲರಿಗೆ ಸಿಎಂ, ಸಂವಿಧಾನದ ಪುಸ್ತಕ ನೀಡಿದರು.  

ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಗುಡ್​ಬೈ ಹೇಳಿ ಮುಖ್ಯವಾಹಿನಿಗೆ ಬಂದಿದ್ದಾರೆ. ಈ ವೇಳೆ ಡಿಜಿ ಐಜಿಪಿ ಅಲೋಕ್‌ ಮೋಹನ್‌, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶರಣಾಗತಿಯಾದ ಆರು ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು.

ಅನ್ಯಾಯವಾದಗ ನ್ಯಾಯ ಸಿಗದಿದ್ದಕ್ಕೆ , ಪ್ರಜಾಸತ್ತಾತ್ಮಕ ಹೋರಾಟಗಳಿಗೆ ಬೆಲೆ ನೀಡದ ಸರ್ಕಾರದ ಧೋರಣೆಗೆ ಬೇಸತ್ತು ಕಳೆದ ಹಲವು ವರ್ಷಗಳಿಂದ ಕಾಡಿನಲ್ಲಿ ನೆಲೆಸಿ ಸಶಸ್ತ್ರ ಹೋರಾಟ ನಡೆಸಿದ್ದರು. ಆರು ಜನರ ಹಿಂದೆ ಒಂದೊಂದೇ ಹಿನ್ನೆಲೆ ಇದೆ. ಇದೀಗ ಅಂತಿಮವಾಗಿ ಕಾಡಿಗೆ ವಿದಾಯ ಹೇಳಿ ಪ್ರಜಾಸತ್ತಾತ್ಮಕವಾಗಿ ಹೋರಾಟ ನಡೆಸಲು ಮುಖ್ಯವಾಹಿನಿಗೆ ಆಗಮಿಸಿದ್ದಾರೆ.

ಶರಣಾಗತರಾದ ನಕ್ಸಲರ ವಿರುದ್ಧ ಇರುವ ಘೋರ ಅಪರಾಧಗಳ ಕಾನೂನು ಪ್ರಕ್ರಿಯೆ ನ್ಯಾಯಾಲಯದಲ್ಲಿ ಮುಂದುವರಿಯುತ್ತವೆ. ರಾಜ್ಯ ಸರ್ಕಾರವು ಸರಿಯಾದ ಕಾರ್ಯ ವಿಧಾನಗಳ ಮೂಲಕ ಶರಣಾದ ನಕ್ಸಲರ ವಿರುದ್ಧ ಬಾಕಿ ಇರುವ ಪ್ರಕರಣಗಳನ್ನು ಹಿಂಪಡೆಯಲು ಪರಿಗಣಿಸಬಹುದು. ಶರಣಾದ ನಕ್ಸಲರಿಗೆ ಉಚಿತ ಕಾನೂನು ಸಹಕಾರ ನೀಡಲು ವಕೀಲರನ್ನು ಒದಗಿಸಬಹುದು. ಅಲ್ಲದೆ ತ್ವರಿತ ವಿಚಾರಣೆಗಾಗಿ ತ್ವರಿತಗತಿ ನ್ಯಾಯಾಲಯ ರಚನೆ ಮಾಡಲು ಸರ್ಕಾರಕ್ಕೆ ಅವಕಾಶ ಇದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *