ಉಡುಪಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಭರದಿಂದ ಸಾಗಿದ್ದು ಈಗಾಗಲೇ ಕಾರ್ಕಳ ಮತ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಬಿಜೆಪಿ ಸುನಿಲ್ ಕುಮಾರ್ 2664 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಸುನಿಲ್ ಕುಮಾರ್ 35808 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮುನಿಯಾಲು ಉದಯ ಶೆಟ್ಟಿ 33164 ಮತಗಳನ್ನು ಪಡೆದಿದ್ದು ತೀವೃ ಪೈಪೋಟಿ ನೀಡುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಪ್ರಮೋದ್ ಮುತಾಲಿಕ್ 2215 ಮತಗಳನ್ನು ಪಡೆದುಕೊಂಡು ಮೂರನೇ ಸ್ಥಾನದಲ್ಲಿದ್ದಾರೆ.