ಹೆಬ್ರಿ: 71ನೆಯ ವನ್ಯಜೀವಿ ಸಪ್ತಾಹ ಕಾರ್ಯಕ್ರಮದ ಅಡಿಯಲ್ಲಿ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಕಾರ್ಕಳದಲ್ಲಿ ನಡೆದ ವಿಭಾಗ ಮಟ್ಟದ 5ರಿಂದ 7ನೇ ತರಗತಿ ವಿಭಾಗದ ಸ್ಪರ್ಧೆಯಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಮುನಿಯಾಲಿನ 6ನೇ ತರಗತಿ ವಿದ್ಯಾರ್ಥಿನಿ ಸ್ತುತಿ ಆಚಾರ್ಯ ಚಿತ್ರಕಲಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ 7ನೇ ತರಗತಿಯ ಅನ್ವಿಕ ಎಂ ಶೆಟ್ಟಿ ವನ್ಯ ಪ್ರಾಣಿಗಳನ್ನು ಗುರುತಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ .
ಇವರಿಗೆ ಶಾಲಾ ಪ್ರಾಂಶುಪಾಲರು, ಉಪ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು , ಶಾಲಾ ಶಿಕ್ಷಕ ವೃಂದ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.