ಬೆಂಗಳೂರು: ಭಾರತವು 76ನೇ ಗಣರಾಜ್ಯೋತ್ಸವ ಆಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಸಂವಿಧಾನದ ಆದರ್ಶಗಳನ್ನು ಸಂರಕ್ಷಿಸುವ ಪ್ರಯತ್ನಗಳನ್ನು ಬಲಪಡಿಸಲು ಮತ್ತು ಸಮೃದ್ಧ ಭಾರತಕ್ಕಾಗಿ ಕೆಲಸ ಮಾಡಲು ಬಯಸುತ್ತಿರುವ ಪ್ರಧಾನಿ ಮೋದಿ, 2025 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಭಾರತಕ್ಕೆ ಶುಭ ಹಾರೈಸಿದ್ದಾರೆ.
ನರೇಂದ್ರ ಮೋದಿಯವರು ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ವೀರ ಯೋಧರಿಗೆ ನಮನ ಸಲ್ಲಿಸಿದರು. ಇಂದು ಬೆಳಗ್ಗೆ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮೋದಿ ಮತ್ತು ಇತರ ಗಣ್ಯರು ಕರ್ತವ್ಯ ಪಥದಲ್ಲಿನ ವೇದಿಕೆಗೆ ತೆರಳಿದರು. ಇಂದು ಬೆಳಗ್ಗೆ 10.30ಕ್ಕೆ ಸಮಾರಂಭದ ಮುಖ್ಯ ಮೆರವಣಿಗೆ ಆರಂಭವಾಗಿದ್ದು, ವಿಜಯ್ ಚೌಕ್ ನಲ್ಲಿ ಪ್ರಾರಂಭವಾಗಿ, ಕರ್ತವ್ಯ ಪಥದಲ್ಲಿ ಮುಂದುವರೆದಿದೆ. ಬಳಿಕ ಇಂಡಿಯಾ ಗೇಟ್ ಮೂಲಕ ಹಾದುಹಾಗಿ, ಕೆಂಪುಕೋಟೆಯಲ್ಲಿ ಮುಕ್ತಾಯಗೊಳ್ಳಲಿದೆ.