Share this news

ನವದೆಹಲಿ: 77ನೇ ಸ್ವಾತಂತ್ರ್ಯಮಹೋತ್ಸವ ಹಿನ್ನಲೆಯಲ್ಲಿ ಆ.13 ರಿಂದ 15 ವರೆಗೆ ದೇಶದಾದ್ಯಂತ ಹರ್ ಘರ್ ತಿರಂಗಾ ಅಭಿಯಾನವನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ.
ಈ ಮೂರು ದಿನ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳನ್ನು ಸ್ಮರಿಸಬೇಕೆಂದು ಸೂಚಿಸಲಾಗಿದೆ.
ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದು ಹಾಗೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅದರ ಸೆಲ್ಫೀ ಫೋಟೋವನ್ನು ವೆಬ್‍ಸೈಟ್ hargartiranga.com ನಲ್ಲಿ ಅಪ್‍ಲೋಡ್ ಮಾಡಬಹುದಾಗಿದೆ
ಆಗಸ್ಟ್ 13 ರಿಂದ 15 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಬಾವುಟಕ್ಕೆ ಅಗೌರವ ತೋರಬಾರದು. ಕಡ್ಡಾಯವಾಗಿ ಧ್ವಜ ಸಂಹಿತೆಯನ್ನು ಪಾಲಿಸಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು. ಧ್ಜಜ ಸಂಹಿತೆಯಂತೆ ಪ್ರತಿದಿನ ಸಂಜೆ ಸೂರ್ಯಾಸ್ತದ ಮೊದಲು ಧ್ವಜವನ್ನು ಇಳಿಸಬೇಕು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಸೂಚಿಸಲಾಗಿದೆ.

 

                        

                          

                        

                          

 

`

Leave a Reply

Your email address will not be published. Required fields are marked *