Share this news

ಕಾರ್ಕಳ: ಸ್ವಾತಂತ್ರ್ಯ ಹೋರಾಟ ಒಬ್ಬ ವ್ಯಕ್ತಿಗೆ ಸೀಮಿತವಾಗಿಲ್ಲ, ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಾಗಿದೆ. ಸ್ವಾತಂತ್ರ್ಯ ಹೋರಾಟ ಒಂದು ರಾಜ್ಯಕ್ಕೆ ಸೀಮಿತವಾಗದೇ ಗ್ರಾಮ ಮಟ್ಟದಲ್ಲಿ ನಡೆದ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದಕ್ಕಿದೆ. ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಲಿದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿದರು.

ಅವರು ಕಾರ್ಕಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಂಜುನಾಥ ಪೈ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿ, ಇಡೀ ಜಗತ್ತೇ ಭಾರತದ ಅಭಿವೃದ್ಧಿಯ ವೇಗವನ್ನು ನೋಡುತ್ತಿದೆ,ಭಾರತವನ್ನು ಜಗತ್ತಿನ ಅತ್ಯಂತ ಶಕ್ತಿಶಾಲಿ ರಾಷ್ಟ್ರವನ್ನಾಗಿಸಬೇಕೆನ್ನುವುದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕೈಜೋಡಿಸೋಣ ಎಂದರು.


ಈ ಸಂದರ್ಭದಲ್ಲಿ ಕಾರ್ಕಳ ಪುರಸಭಾ ಅಧ್ಯಕ್ಷೆ ರೂಪಾ ಟಿ.ಶೆಟ್ಟಿ ಮಾತನಾಡಿ, ಸಂವಿಧಾನದ ಆಶಯದಂತೆ ನಾವೆಲ್ಲರೂ ಜಾತಿ,ಮತ,ಬೇಧವಿಲ್ಲದೇ ವಿವಿಧತೆಯಲ್ಲಿ ಏಕತೆ ಎನ್ನುವ ಮನೋಭಾವನೆಯಲ್ಲಿ ಜೀವನ ನಡೆಸೋಣ ಎಂದು ಕಿವಿಮಾತು ಹೇಳಿದರು. ಕಾರ್ಕಳದ ಸ್ವಚ್ಚತೆಯ ಕುರಿತು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು,ಈ ಕುರಿತು ಮಕ್ಕಳಿಗೂ ಅರಿವು ಮೂಡಿಸುವ ಕೆಲಸವಾಗಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಕಳ ತಹಶಿಲ್ದಾರ್ ನರಸಪ್ಪ ಸ್ವಾಗತಿಸಿ,ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಬಿ. ವಂದಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್. ಬಿ ವಂದಿಸಿದರು



 

 

 

 

                        

                          

                        

                          

 

`

Leave a Reply

Your email address will not be published. Required fields are marked *