Share this news

ನವದೆಹಲಿ, ಆಗಸ್ಟ್​ 15: ಭಾರತ ಇಂದು 79ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದೆ. ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ಸತತ 12ನೇ ಬಾರಿಗೆ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದಾರೆ.

ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ದೀಪಾವಳಿಗೆ ದೇಶದ ಜನತೆಗೆ ದೊಡ್ಡ ಉಡುಗೊರೆಯನ್ನು ನೀಡುವುದಾಗಿ ಘೋಷಿಸಿದ್ದಾರೆ.ಈ ವರ್ಷ ಜಿಎಸ್​ಟಿ ಸುಧಾರಣೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದರು. ಭಾರತೀಯರಿಗೆ ದೊಡ್ಡ ಗಿಫ್ಟ್​ ನೀಡುವುದಾಗಿ ತಿಳಿಸಿದ್ದಾರೆ.

ನಾವು ಸ್ವದೇಶಿ ಉತ್ಪನ್ನಗಳನ್ನು ಬಲವಂತದಿಂದ ಅಲ್ಲ ಬದಲಾಗಿ ತಾಕತ್ತಾಗಿ ಬಳಸಬೇಕು. ವೂಕಲ್ ಫಾರ್ ಲೋಕಲ್​​ ಅನ್ನು ಎಲ್ಲಾ ಭಾರತೀಯರ ಮಂತ್ರವಾಗಿ ಮಾಡಬೇಕು.ಭಾರತದ ಜನರ ಬೆವರಿನಿಂದ ತಯಾರಿಸಿದ ಮತ್ತು ನಮ್ಮ ಜನರ ಕಠಿಣ ಪರಿಶ್ರಮದ ತಯಾರಿಸಿದ ವಸ್ತುಗಳನ್ನು ಮಾತ್ರ ನಾವು ಖರೀದಿಸಬೇಕು.ಆಗ ದೇಶವು ಕೆಲವೇ ದಿನಗಳಲ್ಲಿ ಬದಲಾಗುತ್ತದೆ.ದೇಶದ ಯುವಕರಿಗೆ ತಮ್ಮ ಆಲೋಚನೆಗಳನ್ನು ಎಂದಿಗೂ ಸಾಯಲು ಬಿಡಬೇಡಿ.ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ.

ಸೈಬರ್ ಭದ್ರತೆಯಿಂದ ಹಿಡಿದು ಕೃತಕ ಬುದ್ಧಿಮತ್ತೆಯವರೆಗೆ ಎಲ್ಲವೂ ನಮ್ಮದಾಗಿರುವುದು ಇಂದಿನ ಅಗತ್ಯವಲ್ಲವೇ? ನಮ್ಮ ಜನರ ಶಕ್ತಿ ಇದರಲ್ಲಿ ಭಾಗಿಯಾಗಬೇಕು. ಇಂದು, ಅದು ಸಾಮಾಜಿಕ ಮಾಧ್ಯಮವಾಗಲಿ ಅಥವಾ ವಿಶ್ವದ ಇತರ ವೇದಿಕೆಗಳಾಗಲಿ, ನಾವು ವಿಶ್ವದ ವೇದಿಕೆಗಳಲ್ಲಿ ಕೆಲಸ ಮಾಡುತ್ತಿದ್ದೇವೆ. ನಾವು ಯುಪಿಐನ ಶಕ್ತಿಯನ್ನು ಜಗತ್ತಿಗೆ ತೋರಿಸಿದ್ದೇವೆ. ಡಿಜಿಟಲ್ ವಹಿವಾಟಿನಲ್ಲಿ ಭಾರತ ಮಾತ್ರ ಶೇಕಡಾ 50 ರಷ್ಟು ಕೊಡುಗೆ ನೀಡುತ್ತಿದೆ ಎಂದು ಹೇಳಿದ್ದಾರೆ.

  

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *