

ಕಾರ್ಕಳ,ಆ.16: ಮಾಳ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ ಇವರು ನೆರವೇರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಶಾಲಾ ಪೂರ್ವ ವಿದ್ಯಾರ್ಥಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ,ಮಂಗಳೂರು ಇದರ ಹಾಯಕ ನಿರ್ದೇಶಕ ಸುಂದರ ಸೇರಿಗಾರ್ ಎಂ ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಶಾಲಾ ವಿದ್ಯಾರ್ಥಿಗಳು ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಈ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರು,ಗ್ರಾಮ ಪಂಚಾಯತಿನ ಸಿಬ್ಬಂದಿ ವರ್ಗದವರು, ಪೋಷಕರು, ದಾನಿಗಳು,ಊರವರು, ಪೂರ್ವ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷರಾಗಿ ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ,ಅತಿಥಿಗಳಾಗಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ಗೀತಾ ಸೇರಿಗಾರ್, ಆಡಳಿತ ಮಂಡಳಿಯ ಸದಸ್ಯರುಗಳಾದ ಸುಧೀಶ್ ಶೆಟ್ಟಿ, ಶ್ರೀಮತಿ ವಸಂತಿ, ಶ್ರೀಮತಿ ತಾರಾ ಮತ್ತು ಶಾಲಾ ಹಿರಿಯ ಶಿಕ್ಷಕರಾದ ಶ್ರೀಮತಿ ಶೋಭಾ ಇವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಭಾಷಣವನ್ನು ಮಾಡಿದರು ಹಾಗೂ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆಸಲಾದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಡೆಸಲಾಯಿತು. ಸುಮಾರು ನಾಲ್ಕು ವರ್ಷಗಳಿಂದ ಶ್ರೀಮತಿ ಲಲಿತಾ ಮತ್ತು ಶ್ರೀ ಗೋಪಾಲ ಸೇರಿಗಾರ್ ಇವರು ಪ್ರಾಯೋಜಿಸುತ್ತಿದ್ದಂತಹ 7ನೇ ತರಗತಿಯಲ್ಲಿ ಗರಿಷ್ಟ ಅಂಕಗಳನ್ನು ಪಡೆದಂತಹ 3 ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರು , ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಪೂರ್ವ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಶಿಕ್ಷಕಿ ಅನುಪಮಾ ಸ್ವಾಗತಿಸಿ, ಸುನೀತಾ ವಂದನಾರ್ಪಣೆಗೈದರು. ವಸಂತಿ ಕಾರ್ಯಕ್ರಮ ನಿರೂಪಿಸಿದರು.








.
.
.
.
.
.
.
.
.
.
.
.
.
.
.
.
.
.
.
.
