ಕಾರ್ಕಳ : ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಕಂಬಳಗುತ್ತು ನಿವಾಸಿ ವಿಶ್ವನಾಥ (57 ವರ್ಷ) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಮಂಗಳವಾರ (ಜ.3) ಸಂಜೆ 6:00 ವೇಳೆಗೆ ಲಿಗೋರಿ ಡಿಕುನ್ಹಾ ಎಂಬವರ ತೋಟದಲ್ಲಿ ಅಡಿಕೆ ಕೊಯ್ಯುವ ಸಂದರ್ಭದಲ್ಲಿ ಅಡಿಕೆ ಮರದಿಂದ ಆಯತಪ್ಪಿ, ಕೆಳಗೆ ಬಿದ್ದು ಗಾಯಗೊಂಡವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು (ಬುಧವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ .
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ