Share this news

ಮಂಗಳೂರು: ನಗರದಲ್ಲಿ ಕೆಲ ದಿನಗಳ ಹಿಂದೆ ನಡೆದಿದ್ದ ಆಟೋದಲ್ಲಿ ಕುಕ್ಕರ್ ಬಾಂಬ್  ಬ್ಲಾಸ್ಟ್ ಪ್ರಕರಣ  ದ ತನಿಖೆಯನ್ನು ಎನ್‌ಐಎ ಚುರುಕುಗೊಳಿಸಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಇಂದು ನಗರದಲ್ಲಿನ ಪಿ.ಎ ಇಂಜಿನಿಯರಿAಗ್ ಕಾಲೇಜಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಕುಕ್ಕರ್ ಬಾಂಬ್ ಸ್ಪೋಟಕ ಪ್ರಕರಣ ಸಂಬAಧ ಉಗ್ರ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಆತ ನೀಡಿದ ಮಾಹಿತಿಯ ಆಧಾರದ ಮೇಲೆ ಇಂದು ಪಿ ಎ ಇಂಜಿನಿಯರಿAಗ್ ಕಾಲೇಜಿನ ಮೇಲೆ ಇಂದು 7 ಎನ್‌ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದಾರೆ.

ಪಿ.ಎ ಇಂಜಿನಿಯರಿAಗ್ ಕಾಲೇಜಿನಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬAಧ ಶೋಧ ಕಾರ್ಯ ನಡೆಸುತ್ತಿದ್ದು, ಹಲವು ಮಹತ್ವದ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.

ಶಾರಿಕ್ ನೀಡಿದಂತ ಮಾಹಿತಿಯ ಆಧಾರದ ಮೇಲೆ ಪಿ.ಎ ಇಂಜಿನಿಯರಿAಗ್ ಕಾಲೇಜಿನಲ್ಲಿ ಎಂಜಿನಿಯರಿAಗ್ ಓದುತ್ತಿದ್ದ ಉಡುಪಿ ಮೂಲಕ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ಎನ್‌ಐಎ ವಶಕ್ಕೆ ಪಡೆದಿದೆ ಎನ್ನಲಾಗಿದ್ದು, ಈತ ಶಿವಮೊಗ್ಗದಲ್ಲಿ ನಡೆದಿದ್ದ ಟ್ರಯಲ್ ಬ್ಲಾಸ್ಟ್ ಸೇರಿದಂತೆ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.

 

Leave a Reply

Your email address will not be published. Required fields are marked *