Share this news

ಉಡುಪಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳಿಂದ ಬಂಧಿತನಾಗಿರುವ ಮಂಗಳೂರಿನ ಎಂಜಿನಿಯರಿAಗ್ ವಿದ್ಯಾರ್ಥಿ ರಿಹಾನ್ ಶೇಖ್, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಅವರ ಮಗ. ಇದರಿಂದ ಕಾಂಗ್ರೆಸ್ ಪಕ್ಷದ ಬೇರುಗಳು ಎಲ್ಲೆಲ್ಲಿ ಹರಡಿಕೊಂಡಿವೆ ಎಂದು ಬಹಿರಂಗವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಸ್ಪಷ್ಟನೆ ನೀಡಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಆಗ್ರಹಿಸಿದ್ದಾರೆ.


ಉಡುಪಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಜುದ್ದೀನ್ ಉಳ್ಳಾಲ ಶಾಸಕ ಯು.ಟಿ.ಖಾದರ್ ಅವರ ಪರಮಾಪ್ತ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ತಾಜುದ್ದೀನ್ ಇರುವ ಫೋಟೋಗಳಿವೆ. ನಿಖರ ಪುರಾವೆಗಳಿರುವುದರಿಂದಲೇ ಎನ್‌ಐಎ ರಿಹಾನ್‌ನನ್ನು ಬಂಧಿಸಿದೆ. ಈಗ ಕಾಂಗ್ರೆಸ್ ತಾಜುದ್ದೀನ್ ಮೇಲೆ ಏನು ಕ್ರಮ ಕೈಗೊಳ್ಳುತ್ತದೆ?. ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ಪ್ರಮೋಷನ್ ಕೊಟ್ಟು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡುತ್ತದೆಯೋ? ಅಥವಾ ಪಕ್ಷದಿಂದ ಉಚ್ಚಾಟನೆ ಮಾಡುತ್ತದೆಯೋ? ಎಂದು ಅವರು ಪ್ರಶ್ನಿಸಿದ್ದಾರೆ.

ರಿಹಾನ್ ತಾಯಿಯೂ ತೆಂಕನಿಡಿಯೂರು ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕಿಯಾಗಿದ್ದು, ಕಾಲೇಜಿನ ಬಗ್ಗೆ ಅಪಪ್ರಚಾರ ಮಾಡಿದ್ದರು. ಕಾಲೇಜಿಗೆ ವಿದ್ಯಾರ್ಥಿಗಳು ದಾಖಲಾಗಬೇಡಿ ಎಂದು ಹೇಳಿರುವ ಮತ್ತು ಧಾನಿ ಮೋದಿ ಬಗ್ಗೆ ಅವಹೇಳನಕರ ಮಾತುಗಳನ್ನು ಆಡಿರುವ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ. ಕಳೆದ 3 ತಿಂಗಳ ಹಿಂದೆಯೇ ಈಕೆಯ ಬಗ್ಗೆ ಶಿಕ್ಷಣ ಸಚಿವ ನಾಗೇಶ್ ಅವರಿಗೆ ದಾಖಲೆಯೊಂದಿಗೆ ಲಿಖಿತ ದೂರು ನೀಡಿದ್ದೇನೆ ಎಂದರು.

ರಿಹಾನ್ ಶೇಖ್, ಮಂಗಳೂರು ಸ್ಫೋಟಕ್ಕೆ ಸಂಬAಧಿಸಿ ಕೊರಿಯರ್‌ಗಳನ್ನು ತನ್ನ ಹೆಸರಿನಲ್ಲಿ ಬ್ರಹ್ಮಾವರದಲ್ಲಿರುವ ತನ್ನ ಫ್ಲಾಟ್‌ಗೆ ತರಿಸಿಕೊಳ್ಳುತ್ತಿದ್ದ. ಜೊತೆಗೆ, ಆನ್‌ಲೈನ್ ಹಣದ ವ್ಯವಹಾರ ಕೂಡ ನಡೆಸುತ್ತಿದ್ದ. ಚಪ್ಪಲಿ ಅಂಗಡಿ ನಡೆಸುತ್ತಿದ್ದ ಆತನ ತಂದೆ ತಾಜುದ್ದೀನ್, ಈ ಹಿಂದೆ ನಷ್ಟದಿಂದ ಸಂಕಷ್ಟಕ್ಕೆ ಸಿಕ್ಕಿದ್ದ. ಈಗ ಫ್ಲಾö್ಯಟ್ ಖರೀದಿಸುವಷ್ಟು ಶ್ರೀಮಂತನಾಗಿದ್ದಾನೆ. ಈ ಬಗ್ಗೆ ತನಿಖೆ ನಡೆಯಬೇಕು ಎಂದು ಅವರು ಆಗ್ರಹಿಸಿದರು.

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಗುರವಾಗಿ ಮಾತನಾಡಿದ್ದರು. ಅದರ ಹಿಂದಿನ ಮರ್ಮ ಈಗ ಬಹಿರಂಗವಾಗಿದೆ. ಈ ಪ್ರಕರಣಕ್ಕೆ ಸಂಬAಧಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಾಜುದ್ದೀನ್ ಎಂಬವರ ಮಗ ರಿಹಾನ್ ಶೇಖ್‌ನನ್ನು ಎಎನ್‌ಐ ಬಂಧಿಸಿದೆ. ಕಾಂಗ್ರೆಸ್ ಭಯೋತ್ಪಾದಕರಿಗೆ ಬೆಂಬಲ ನೀಡುವ ಪಕ್ಷ ಎಂಬುದು ಸಾಬೀತಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.

Leave a Reply

Your email address will not be published. Required fields are marked *