Share this news

ಕಾರ್ಕಳ: ತುಳುನಾಡ ಸೃಷ್ಟಿಕರ್ತ ಪರಶುರಾಮನ ಕಂಚಿನ ಪುತ್ಥಳಿ ಹಾಗೂ ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆಯು ಜ.27 ರಂದು ನಡೆಯಲಿದ್ದು, ಈ ನಿಟ್ಟಿನಲ್ಲಿ ಕಾರ್ಕಳ ಹಾಗೂ ಹೆಬ್ರಿ ತಾಲೂಕಿನ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪರಶುರಾಮ ಛದ್ಮವೇಷ ಸ್ಪರ್ಧೆಯನ್ನು ಇಂದು ಏಕಕಾಲದಲ್ಲಿ ಆಯೋಜಿಸಲಾಗಿತ್ತು.

 

ಈ ಕಾರ್ಯಕ್ರಮದಲ್ಲಿ 230 ಅಂಗನವಾಡಿ ಕೇಂದ್ರಗಳ 500ಕ್ಕೂ ಅಧಿಕ ಮಕ್ಕಳು ಭಾಗವಹಿಸಿದ್ದು, ಸುಮಾರು 3000 ಮಕ್ಕಳು ಇನ್ನೆರಡು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಇಂದು ವಿಜೇತ ಮಕ್ಕಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಹಾಗೂ ಪರಶುರಾಮ ದೇವರ ಸ್ಮರಣಿಕೆಯನ್ನು ನೀಡಲಾಯಿತು.

ಈ ಛದ್ಮವೇಷದಲ್ಲಿ ಪಾಲ್ಗೊಂಡ ಎಲ್ಲಾ ಪುಟಾಣಿ ಮಕ್ಕಳಿಗೆ ಹಾಗೂ ಇದನ್ನು ಯಶಸ್ವಿಯಾಗಿ ಆಯೋಜನೆ ಮಾಡಿರುವ ಅಂಗನವಾಡಿ ಶಿಕ್ಷಕಿಯರಿಗೆ, ಸಹಾಯಕರಿಗೆ ಹಾಗೂ ಸಹಕರಿಸಿದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸಚಿವ ವಿ ಸುನಿಲ್ ಕುಮಾರ್‌ರವರು ಅಭಿನಂದನೆ ಸಲ್ಲಿಸಿದ್ದಾರೆ.

 

Leave a Reply

Your email address will not be published. Required fields are marked *