ಚಿಕ್ಕಮಗಳೂರು : ಹಿಂದೂಪರ ಸಂಘಟನೆಗಳ ವಿರುದ್ಧ ಶೃಂಗೇರಿ ಕಾಂಗ್ರೆಸ್ ಶಾಸಕ ಟಿ.ಡಿ ರಾಜೇಗೌಡಹಿಂದೂಪರ ಸಂಘಟನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇಸರಿ ಶಾಲು, ಕುಂಕುಮ, ದತ್ತಮಾಲೆ ಹಾಕಿದ್ರೆ ಹೊಟ್ಟೆ ತುಂಬುವುದಿಲ್ಲ. ದತ್ತಪೀಠದ ಹೋರಾಟದಿಂದ ಅನ್ನ ಸಿಗುವುದಿಲ್ಲ ಎಂದು ಹೇಳಿದ್ದಾರೆ.
ಅಯೋಧ್ಯೆ ಹೋರಾಟದಲ್ಲಿ ಬಾಬ್ರಿ ಮಸೀದಿ ಧ್ವಂಸದ ಸಂದರ್ಭದಲ್ಲಿ ಲಕ್ಷಾಂತರ ಜನರು ಸಾವನ್ನಪ್ಪಿದ್ದಾರೆ. ಹಿಂದೂಪರ ಸಂಘಟನೆಗಳು ಹೋರಾಟದಲ್ಲಿ ಲಕ್ಷಾಂತರ ಜನರನ್ನ ಬಲಿಕೊಟ್ಟಿದ್ದಾರೆ ಎಂದು ಅವರು ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಶೃಂಗೇರಿ ಶಾಸಕರ ಈ ಹೇಳಿಕೆ ವಿರುದ್ದ ಹಿಂದೂ ಪರ ಸಂಘಟನೆಗಳಿAದ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಶಾಸಕ ರಾಜೇಗೌಡ ಬಹಿರಂಗವಾಗಿ ಹಿಂದೂಪರ ಸಂಘಟನೆಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿವೆ.