Share this news

ಕಾರ್ಕಳ: ಕಾರ್ಕಳ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಂ ಪಾರ್ಕ್ ಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭೇಟಿ ನೀಡಿ ಪಾರ್ಕ್ ಕಾಮಗಾರಿಯನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯವೇ ಗುರುತಿಸುವಂತೆ ಸಚಿವ ಸುನಿಲ್ ಕುಮಾರ್ ಅವರು ಪ್ರವಾಸೋದ್ಯಮಕ್ಕೆ ಒತ್ತು ನೀಡಿ ಪಾರ್ಕ್ ನಿರ್ಮಿಸಿದ್ದಾರೆ. ಸುನಿಲ್ ಕುಮಾರ್ ವಿವಿಧ ಕಡೆಗಳಿಂದ ಅನುದಾನ ತಂದು ಇಡೀ ಕಾರ್ಕಳದ ಅಭಿವೃದ್ಧಿಯಲ್ಲಿ ತೊಡಗಿದ್ದಾರೆ . ಪರಶುರಾಮ ಥೀಂ ಪಾರ್ಕ್ ನಿರ್ಮಾಣವಾಗಿರುವುದು ನಿಜಕ್ಕೂ ಖುಷಿ ತಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಚಿವ ಸುನಿಲ್ ಕುಮಾರ್, ಕಾರ್ಕಳ ತಹಸಿಲ್ದಾರ್ ಪ್ರದೀಪ್ ಕುರ್ಡೇಕರ್, ಕಾರ್ಕಳ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಗುರುದತ್, ಹೆಬ್ರಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜೆ ಶಶಿಧರ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *