Share this news

ಕಲಬರುಗಿ : ಇಂದು ವಿಶ್ವಾದ್ಯಂತ ನಟ ಶಾರೂಖ್ ಖಾನ್ ನಟನೆಯ ಪಠಾಣ್ ಚಿತ್ರ ಬಿಡುಗಡೆಯಾಗಿದ್ದು, ಕಲಬುರಗಿ ಮತ್ತು ಬೆಳಗಾವಿಯಲ್ಲಿ ಪಠಾಣ್ ಚಿತ್ರ ಪ್ರದರ್ಶನ ವಿರೋಧಿಸಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ಕಲಬುರಗಿ    ನಗರದ ಶೆಟ್ಟಿ ಮಲ್ಟಿಫ್ಲೆಕ್ಸ್ ನ ಮುಂದೆ ಪಠಾಣ್ ಚಿತ್ರ ಪ್ರದರ್ಶನ ವಿರೋಧಿಸಿ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ ನಡೆಸಿದೆ. ಮುಂಜಾಗ್ರತಾ ಕ್ರಮವಾಗಿ ರಾಘವೇಂದ್ರ ನಗರ ಪೊಲೀಸರು ಭದ್ರತೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಪಠಾಣ್ ಚಿತ್ರ ಪ್ರದರ್ಶಿಸದಂತೆ ಒತ್ತಾಯಿಸಿ ನಗರದ ಸ್ವರೂಪ್ ಚಿತ್ರಮಂದಿರದ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಚಿತ್ರಮಂದಿರ ಬಳಿ ಹಾಕಿದ್ದ ಪಠಾಣ್ ಬ್ಯಾನರ್ ಹರಿದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಪೊಲೀಸರು ಆಗಮಿಸಿ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *