ಕಾರ್ಕಳ : ಆಚಾರ-ವಿಚಾರ ಪದ್ಧತಿಗಳು ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಭಿನ್ನವಾಗಿರುತ್ತವೆ. ಒಂದು ವೇದಿಕೆಯಲ್ಲಿ ಬೇರೆ ಬೇರೆ ಪ್ರದೇಶಗಳ ವಸ್ತು, ಉತ್ಪನ್ನಗಳನ್ನು ನೋಡುವ ಅವಕಾಶ ದೊರಕಿದೆ. ವಿವಿಧ ಜಿಲ್ಲೆಗಳ ಉತ್ಪನ್ನಗಳ ಪ್ರದರ್ಶನ ಮಾರಾಟದಿಂದ ಸಬಲೀಕರಣದ ಬಲಗೊಳ್ಳುತ್ತದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಭಾರತ ಸರಕಾರ-ಗಾಂಧೀ ಸಿಲ್ಕ್ ಬಜಾರ್ , ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಬೆಂಗಳೂರು, ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನದ ಸಂಜೀವಿನಿ ರಾಷ್ಟ್ರಮಟ್ಟದ ಕರಕುಶಲ ವಸ್ತುಪ್ರದರ್ಶನ ಮತ್ತು ರಾಜ್ಯದ ಮಟ್ಟದ ಸಂಜೀವಿನಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದರು.
ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ವಸ್ತುಪ್ರದರ್ಶನ ಉದ್ಘಾಟಿಸಿ ಶುಭಹಾರೈಸಿದರು.
ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕಿ ರೂಪಾ ಡಿ. ಮದ್ಗಲ್ ಮಾತನಾಡಿ, ರಾಷ್ಟ್ರ ಮಟ್ಟದ ಕರಕುಶಲ ಮೇಳ ಇಲ್ಲಿ ನಡೆಯುತ್ತಿರುವುದು ಸಂತಸದ ಸಂಗತಿ. ಸರಕಾರ ಮತ್ತು ಸಚಿವರಿಂದ ನೆರವಿನಿಂದ ಯಶಸ್ವಿಯಾಗಿ ನಡೆಯಲಿದೆ ಎಂದರು.
ಜಿ.ಪಂ ಸಿಇಒ ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿದರು.
ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಐಎಎಸ್ ಅಧಿಕಾರಿ ಯತೀಶ್, ಕುಂದಾಪುರ ಉಪವಿಭಗದ ಸಹಾಯಕ ಆಯುಕ್ತ ವಿ. ರಾಜು, ಹಿರಿಯ ನ್ಯಾಯವಾದಿ ಎಂ.ಕೆ ವಿಜಯಕುಮಾರ್, ಕರಕುಶಲ ಹ್ಯಾಂಡಿಕ್ರಾಪ್ಟ್ ಅಸಿಸ್ಟೆಂಟ್ ಡೈರೆಕ್ಟರ್ ಮೈಕಲ್, ಸಂಜೀವಿನಿ ಒಕ್ಕೂಟದ ತಾಲೂಕು ಅಧ್ಯಕ್ಷೆ, ರೇವತಿ ಉಪಸ್ಥಿತರಿದ್ದರು.
ಪ್ರಮೀಳಾ ನಾಗೇಶ್ ಸ್ವಾಗತಿಸಿ, ಅಂಕಿತಾ ವಂದಿಸಿದರು. ಗಣೇಶ್ ಜಾಲ್ಸೂರು ನಿರೂಪಿಸಿದರು.
ಈ ಸಂದರ್ಭದಲ್ಲಿ ಕಾರ್ಕಳ ಪ್ರವಾಸೋದ್ಯಮ ಕುರಿತ ಕಿರು ಹೊತ್ತಿಗೆ ಬಿಡುಗಡೆ ಮಾಡಲಾಯಿತು.