ಹೆಬ್ರಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡ್ಪಾಲು ಗ್ರಾಮದ ಸೋಮೇಶ್ವರ ಜನತಾ ಕಾಲೋನಿ ಎಲ್ಲಿ ಮದ್ಯವ್ಯಸನಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ.
ಸೋಮೇಶ್ವರ ಜನತಾ ಕಾಲೋನಿ ನಿವಾಸಿ ವಿಜಯ (45 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ವಿಪರೀತ ಮಧ್ಯಪಾನದ ಚಟವನ್ನು ಹೊಂದಿದ್ದ ಇವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಮಧ್ಯಾಹ್ನ ತನ್ನ ಮನೆಯ ಕೋಣೆಯಲ್ಲಿ ಮಾಡಿನ ಜಂತಿಗೆ ಸೀರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ .
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ