ಬೆಂಗಳೂರು: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ 15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬAಧಿಸಿದAತೆ 1:1 ಅನುಪಾತದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಇದೀಗ ಇದಕ್ಕೆ ಕರ್ನಾಟಕ ಹೈಕೋರ್ಟ್ ಪ್ರಾಥಮಿಕ ಶಾಲಾ ಶಿಕ್ಷಕರ ತಾತ್ಕಾಲಿಕ ಆಯ್ಕೆ ಪಟ್ಟಿ ರದ್ದು ಮಾಡಿ ಆದೇಶ ಹೊರಡಿಸಿದೆ. ಇಂದು (ಜನವರಿ 30) ಹೈಕೋರ್ಟ್ ಏಕಸದಸ್ಯ ಈ ಮಹತ್ವದ ಆದೇಶ ಹೊರಡಿಸಿದೆ.
ಕಳೆದ ನವೆಂಬರ್ 18ರಂದು ಶಿಕ್ಷಣ ಇಲಾಖೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ಇದರಲ್ಲಿ ಇತರೆ ಹಿಂದುಳಿದ ವರ್ಗಗಳ ಜಾತಿ ಮತ್ತು ಆದಾಯ ಪ್ರಮಾಣಪತ್ರ ಸಂಬAಧ ಇಲಾಖೆಯ ನಿಯಮ ಗೊಂದಲಕ್ಕೆ ಕಾರಣವಾಗಿತ್ತು. ವಿವಾಹಿತ ಮಹಿಳಾ ಅಭ್ಯರ್ಥಿಗಳ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಆಧಾರವಾಗಿ ನೀಡುವಂತೆ ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ನೂರಾರು ಮಹಿಳಾ ಅಭ್ಯರ್ಥಿಗಳು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅಭ್ಯರ್ಥಿಗಳ ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗಬೇಕೇ ವಿನಹ ಪತಿಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಅನ್ವಯವಾಗುವುದಿಲ್ಲ. ತಂದೆಯ ಜಾತಿ ಮಕ್ಕಳು ಮುಂದುವರಿಸುವುದರಿAದ ಅದನ್ನೇ ಆಧಾರವಾಗಿ ಪರಿಗಣಿಸಬೇಕೆಂದು ಮಹಿಳಾ ಅಭ್ಯರ್ಥಿಗಳ ಪರ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ರವರಿದ್ದ ಏಕಸದಸ್ಯ ಪೀಠ, ಒಬಿಸಿ ಮಹಿಳಾ ವಿವಾಹಿತ ಅಭ್ಯರ್ಥಿಗಳ ಆಯ್ಕೆಯಲ್ಲಿ ಪತಿಯ ಬದಲು ತಂದೆಯ ಜಾತಿ ಮತ್ತು ಆದಾಯ ಪ್ರಮಾಣಪತ್ರ ಪರಿಗಣಿಸುವಂತೆ ಆದೇಶ ನೀಡಿದೆ. ಹೀಗಾಗಿ ಹೈಕೋರ್ಟ್ ಸೂಚನೆಯಂತೆ ಶಿಕ್ಷಣ ಇಲಾಖೆ ಹೊಸದಾಗಿ ಆಯ್ಕೆ ಪಟ್ಟಿ ಪ್ರಕಟಿಸಬೇಕಿದೆ. ಈ ಮೊದಲು ಶಾಲಾ ಶಿಕ್ಷಕರ ನೇಮಕಾತಿಗೆ 1:1 ತಾತ್ಕಾಲಿಕ ಆಯ್ಕೆ ಪಟ್ಟಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದ್ರೆ, ಇದೀಗ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನೇ ರದ್ದುಗೊಳಿಸಿ ಆದೇಶಿಸಿದೆ.