ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿ ಮಂಗಳವಾರ ನಡೆದಿದೆ.
ಕಾರಿನಲ್ಲಿದ್ದ ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ.
ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.