ಬೆಂಗಳೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಹೆಸರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವಂತೆ ನಕಲಿ ಪತ್ರ ಸೃಷ್ಟಿಸಲಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದು , ದುರುಳರ ಬಗ್ಗೆ ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡ ನಕಲಿ ಪತ್ರವೊಂದು ಹರಿದಾಡುತ್ತಿದೆ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷರ ಸಂಬAಧವನ್ನು ಕೆಡಿಸುವ ದುರುದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಈ ಪತ್ರಕ್ಕೂ ನನಗೂ ಸಂಬAಧ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಗೆಲುವಿನ ಹಾದಿಯಲ್ಲಿರುವ ನಮ್ಮ ಪಕ್ಷದ ಬಗ್ಗೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುವ ಉದ್ದೇಶದಿಂದಲೇ ಈ ನಕಲಿ ಪತ್ರವನ್ನು ಹರಿಯಬಿಡಲಾಗಿದೆ. ಈ ಬಗ್ಗೆ ನಾನು ಪೋಲಿಸರಿಗೆ ದೂರು ನೀಡಲಿದ್ದು, ಈ ದುಷ್ಕೃತ್ಯದ ಹಿಂದಿನ ದುರುಳರನ್ನು ಪತ್ತೆ ಹಚ್ಚಿ ಶಿಕ್ಷೆ ನೀಡಬೇಕು ಎಂದು ಹೇಳಿದ್ದಾರೆ.