ಕಾರ್ಕಳ : ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಮುದಲಾಡಿ ಎಂಬಲ್ಲಿ 80 ರ ಹರೆಯದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.
ಸೂರ್ಯ (80 ವರ್ಷ) ಮೃತಪಟ್ಟವರು. ಅವರು ಮೊದಲಾಡಿಯ ತಮ್ಮ ಸೋದರಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ಮನೆಯಲ್ಲಿ ಕುಸಿದು ಬಿದ್ದ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿದ್ದರು.
ಸೂರ್ಯ ಅವರು ವಯೋವೃದ್ಧರಾಗಿದ್ದು ಅನಾರೋಗ್ಯದಿಂದ ಕುಸಿದು ಬಿದ್ದು ಮೃತಪಟ್ಟಿದ್ದು, ಈ ಕುರಿತು ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.