ಬೆಂಗಳೂರು : ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಸಿದ್ಧತೆ ಕಾರ್ಯ ನಡೆಸುತ್ತಿದ್ದು, ಎಲ್ಲಾ 224 ಕ್ಷೇತ್ರಗಳಿಗೂ ಚುನಾವಣಾಧಿಕಾರಿಗಳನ್ನು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ಆದೇಶಿಸಿದೆ.
ಈ ಸಂಬಂಧ ಕೇಂದ್ರ ಚುನಾವಣಾ ಆಯೋಗವು ರಾಜ್ಯ ಮುಖ್ಯಚುನಾವಣಾಧಿಕಾರಿಗೆ ಪತ್ರ ಬರೆದು ಮಾಹಿತಿ ನೀಡಿದೆ. ಪ್ರತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚುನಾವಣಾಧಿಕಾರಿಗಳನ್ನಾಗಿ ಮತ್ತು ತಹಶೀಲ್ದಾರ್‌ಗಳು ಸೇರಿದಂತೆ ಇತರೆ ಅಧಿಕಾರಿಗಳನ್ನು ಸಹಾಯಕ ಚುನಾವಣಾಧಿಕಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ. ಚುನಾವಣೆಗೆ ಸಂಬAಧಿಸಿದAತೆ ಅಧಿಕಾರಿಗಳು ಸಿದ್ಧತೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದು, ಅವರಿಗೆ ಪೂರಕವಾಗಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ.
ಪ್ರ‍್ರತಿ ಕ್ಷೇತ್ರದ ಕುರಿತು ಸಂಬAಧಪಟ್ಟ ಅಧಿಕಾರಿಗಳಿಗೆ ಮಾಹಿತಿ ಇರುವ ಹಿನ್ನೆಲೆಯಲ್ಲಿ ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳನ್ನೇ ಚುನಾವಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಶೀಘ್ರದಲ್ಲಿಯೇ ಅವರಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ತರಬೇತಿಯನ್ನು ಸಹ ನೀಡಲಾಗುತ್ತದೆ.