Share this news

ಕಾರ್ಕಳ:  ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ (ರಿ.) ಸಚ್ಚೇರಿಪೇಟೆ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ  ಸಚ್ಚರಿಪೇಟೆ ಘಟಕದ ಸಹಯೋಗದಲ್ಲಿ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆಯ ಶ್ರೀ ಮಹಾಮ್ಮಾಯೀ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ಫೆಬ್ರವರಿ.11 ಶನಿವಾರದಂದು ಸಂಜೆ 4 ಗಂಟೆಗೆ 19ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರಗಲಿದೆ.

ಅಂದು ರಾತ್ರಿ 7 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8ಕ್ಕೆ ನೃತ್ಯ ವೈವಿಧ್ಯ, ರಾತ್ರಿ 8.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ಹಾಗೂ ರಾತ್ರಿ ಗಂಟೆ 10ಕ್ಕೆ ಮಂಗಳೂರಿನ ಲಕುಮಿ ತಂಡದ ಕುಸಾಲ್ದ ಕಲಾವಿದೆರ್ ಅಭಿನಯಿಸುವ, ಲ. ಕಿಶೋರ್ ಡಿ ಶೆಟ್ಟಿ ನಿರ್ಮಿಸಿ ನಿರ್ದೇಶಿಸಿರುವ ‘ಅವುದಾಲಾಪುಜಿ’ ಎಂಬ ತುಳು ತೆಲಿಕೆದ ನಾಟಕ ಜರಗಲಿರುವುದು.


ಧಾರ್ಮಿಕ ಸಭೆಯಲ್ಲಿ ಶ್ರೀ ಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಪರಮಪೂಜ್ಯ ಶ್ರೀ ಈಶ ವಿಠ್ಠಲದಾಸ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಕಿನ್ನಿಗೋಳಿ ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಲಿದ್ದು, ಜಾನಪದ ವಿಮರ್ಶಕರಾದ ತಮ್ಮಣ್ಣ ಶೆಟ್ಟಿ ಧಾರ್ಮಿಕ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಜರಂಗದಳದ ದಕ್ಷಿಣ ಪ್ರಾಂತ್ಯ ಸಂಯೋಜಕರಾದ ಸುನಿಲ್ ಕೆ ಆರ್, ವಿಶ್ವ ಹಿಂದೂ ಪರಿಷತ್‌ನ ಬೆಳ್ಮಣ್ ವಲಯದ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಶನೈಶ್ಚರ ಪೂಜಾ ಸೇವಾ   ಟ್ರಸ್ಟ್ನ ಪ್ರಕಟಣೆ ತಿಳಿಸಿದೆ.

 

Leave a Reply

Your email address will not be published. Required fields are marked *