ಕಾರ್ಕಳ: ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿ ಪಾದಾಚಾರಿ ಸಾವನ್ನಪ್ಪಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.
ಗುರುವಾರ ರಾತ್ರಿ 9 ಗಂಟೆಯ ವೇಳೆಗೆ ಕಾರ್ಕಳ ಹೆಬ್ರಿ ಮುಖ್ಯ ರಸ್ತೆಯ ಕುಕ್ಕುದಕಟ್ಟೆ ಎಂಬಲ್ಲಿ ಕುಟ್ಟಿ ಶೆಟ್ಟಿ (50 ವರ್ಷ) ಎಂಬವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಡಿಕ್ಕಿಯಾಗಿದೆ.
ಟೆಂಪೋ ಚಾಲಕ ಗೋಪಾಲ ಅತಿವೇಗ ಹಾಗೂ ನಿರ್ಲಕ್ಷತನದಿಂದ ಟೆಂಪೋವನ್ನು ಎಡಬದಿಯ ಮಣ್ಣು ರಸ್ತೆಗೆ ಚಲಾಯಿಸಿಕೊಂಡು ಬಂದು ನಡೆದುಕೊಂಡು ಹೋಗುತ್ತಿದ್ದ ಕುಟ್ಟಿ ಶೆಟ್ಟಿಯವರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ರಭಸಕ್ಕೆ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೇ ದಾರಿಯಲ್ಲಿ ಹೋಗುತ್ತಿದ್ದ ವಿಕ್ಕಿ ಶೆಟ್ಟಿ ಎಂಬವರು ಕುಟ್ಟಿ ಶೆಟ್ಟಿ ಅವರನ್ನು ಉಪಚರಿಸಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಅವರು ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.